ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರ ಸಹಯೋಗದಲ್ಲಿ ಕಲಾ ಪ್ರತಿಭೋತ್ಸವ-2025 ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವು ಡಿಸೆಂಬರ್ 10 ಮತ್ತು 11ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಎದುರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಲಿವೆ.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ. ಪಾಟೀಲ, ಡಾ. ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಕುಮಾರ ಟಿಎಚ್‌ಎಸ್, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯತ್ರಿ, ಜಿಲ್ಲಾಧಿಕಾರಿ ಮತ್ತು ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ ಕೆ.ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಚ್. ಚೆನ್ನೂರು, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಶಂಕ್ರಪ್ಪ ಆರ್. ಸಂಕಣ್ಣವರ, ಕರ್ನಾಟಕ ಬಂಜಾರ ಅಕಾಡೆಮಿ ಸದಸ್ಯೆ ಸಾವಿತ್ರಿ ಲಮಾಣಿ ಆಗಮಿಸುವರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವ್ಹಿ.ಬಳ್ಳಾರಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ-ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು.



