ಕಲಬುರಗಿ:- ಜಿಲ್ಲೆಯ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ತಡರಾತ್ರಿ ಕಾರು ಮತ್ತು ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿದ್ದು, ಇಬ್ಬರು ಯುವಕರು ಸಜೀವ ದಹನಗೊಂಡಿದ್ದಾರೆ.
ಆಕಾಶ ಧನವಂತ (19), ಸುಶೀಲ (28), ಮೃತರು. ಬೈಕ್ಗೆ ಡಿಕ್ಕಿಯಾದ ರಭಸಕ್ಕೆ ವಾಹನಕ್ಕೆ ಬೆಂಕಿ ಹೊತ್ತಿಕೊಂಡು, ಅಲ್ಲಿ ಇದ್ದ ಆಕಾಶ ಧನವಂತ (19) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬರಾದ ಸುಶೀಲ (28) ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟರು.
ಘಟನೆ ಕುರಿತಾಗಿ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



