ಕಲಬುರಗಿ:- ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ದೇವಲುನಾಯಕ ತಾಂಡಾದಲ್ಲಿ ಜರುಗಿದೆ.
Advertisement
ಘಟನೆ ಪರಿಣಾಮ ಮನೆಯಲ್ಲಿದ್ದ ಹಣ, ಚಿನ್ನಾಭರಣ, ಫ್ರಿಡ್ಜ್, ಟಿವಿ, ದವಸಧಾನ್ಯ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದೆ. ತಾಂಡಾದ ಕಮಲಾಬಾಯಿ ರಾಠೋಡ್ ಎಂಬುವರಿಗೆ ಸೇರಿದ ಮನೆ ಇದಾಗಿದ್ದು, ಘಟನೆಯಿಂದ ಸುಮಾರು ನಾಲ್ಕು ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.