ಕಲಬುರಗಿ:- ಪಡಿತರ ಅಕ್ಕಿ ಮತ್ತು ಜೋಳವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋದಾಮಿನ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಖಂಡೇರಾಯನಪಲ್ಲಿ ಗ್ರಾಮದಲ್ಲಿ ಜರುಗಿದೆ.
Advertisement
ಅನೇಕ ವರ್ಷಗಳಿಂದ ಚಾಂದ್ ಎಂಬ ವ್ಯಕ್ತಿ ಇಲ್ಲಿನ ಗೋದಾಮಿನಲ್ಲಿ ಅಕ್ರಮವಾಗಿ ನೂರಾರು ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ ಜೋಳ ದಾಸ್ತಾನು ಮಾಡಿ ಸಾಗಾಟ ಮಾಡುತ್ತಿದ್ದ. ಈ ಸಂಬಂಧ ಖಚಿತ ಮಾಹಿತಿ ಮೇರೆಗೆ ಕಲಬುರಗಿಯ ಆಹಾರ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.
ದಾಳಿ ವೇಳೆ 250 ಕ್ಕೂ ಹೆಚ್ಚು ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ. ಕೂಡಲೇ ಅಧಿಕಾರಿಗಳು, ಎರಡು ಲಾರಿಯಷ್ಡು ಪಡಿತರ ಅಕ್ಕಿ ಹಾಗೂ ಜೋಳ ವಶಕ್ಕೆ ಪಡೆದಿದ್ದಾರೆ.
ಘಟನೆ ಸಂಬಂಧ ಸೇಡಂ ತಾಲೂಕಿನ ಮುಧೋಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.