ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ.
Advertisement
ರೌಡಿಶೀಟರ್ ಖಲೀಲ್ ಅಹಮದ್ (38) ಕೊಲೆಯಾದಾತ. ತಡರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ರೌಡಿಶೀಟರ್ ಖಲೀಲ್ ಕಳೆದ ಹಲವು ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ರೌಡಿಶೀಟರ್ ಆಗಿದ್ದನು. ನಿವೇಶನ ವಿಚಾರಕ್ಕೆ ಗಲಾಟೆ ಆಗಿ ದುಷ್ಕರ್ಮಿಗಳು ಕೊಲೆ ಮಾಡಿರೋ ಶಂಕೆಯಾಗಿದ್ದು, ಈ ಘಟನೆ ಸಂಬಂಧ ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.