ಕಲಬುರ್ಗಿ ಗ್ರಂಥಪಾಲಕಿ ಆತ್ಮಹತ್ಯೆ: ಸಿಬಿಐ ತನಿಖೆ ನಡೆಸಲು ಆರ್. ಅಶೋಕ್ ಆಗ್ರಹ

0
Spread the love

ಬೆಂಗಳೂರು: ಕಲಬುರ್ಗಿಯ ಗ್ರಂಥಾಲಯದ ನೌಕರಿಯಲ್ಲಿದ್ದ ಮಹಿಳೆಯದು ಆತ್ಮಹತ್ಯೆಯಲ್ಲ; ಅದು ಸರಕಾರಿ ಪ್ರಾಯೋಜಿತ ಕೊಲೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಈ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿದರು.

Advertisement

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ನೌಕರರು ನ್ಯಾಯಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಘಟನೆಯನ್ನು ಮುಚ್ಚಿ ಹಾಕುವ ಎಸ್‍ಐಟಿ, ಆಯೋಗ ರಚಿಸುವ ಸಾಧ್ಯತೆ ಇದೆ. ಕರೂರಿನಲ್ಲಿ ಸುಮಾರು 50 ಜನ ಸತ್ತಿದ್ದರು. ಅಲ್ಲಿ ಎಸ್.ಐ.ಟಿ. ಮಾಡಿ ಆ ಸರಕಾರ ಮುಚ್ಚಿ ಹಾಕುವ ಪ್ರಯತ್ನ ಮಾಡಿತ್ತು. ಆದರೆ, ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ನೀಡಿದೆ. ಈ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದರು.

ವೇತನ ಸಿಗದೇ ಗ್ರಂಥಪಾಲಕರ ಆತ್ಮಹತ್ಯೆ, ಬಿಲ್ ಪಾವತಿ ಆಗದೇ ಗುತ್ತಿಗೆದಾರರ ಆತ್ಮಹತ್ಯೆ, ವರ್ಗಾವಣೆ ಕಮಿಷನ್ ದಂಧೆಯಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ, ನಿಗಮಗಳಲ್ಲಿ ಸರಕಾರಿ ಸಾಲ ಸಿಗದೇ ಮೈಕ್ರೋ ಫೈನಾನ್ಸ್ ಕಿರುಕುಳದಲ್ಲಿ ಬಡವರ ಆತ್ಮಹತ್ಯೆ, ಬರ ಮತ್ತು ಅತಿವೃಷ್ಟಿಯಿಂದ ಪರಿಹಾರ ಸಿಗದೇ 300ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಆಗಿದೆ. ಇದು ಮನೆಹಾಳರ ಸರಕಾರ. ದಿವಾಳಿ ಮಾಡಿ ಜನಸಾಮಾನ್ಯರಿಗೆ ಆತ್ಮಹತ್ಯೆ ಭಾಗ್ಯವನ್ನು ಆರನೇ ಗ್ಯಾರಂಟಿಯಾಗಿ ನೀಡಿದೆ ಎಂದು ಟೀಕಿಸಿದರು. ಇವರು ಕಾಂಗ್ರೆಸ್ಸಿನ ಸಚಿವರೆಲ್ಲ ಯಮ ಕಿಂಕರರು, ಸಾವಿನ ಗ್ಯಾರಂಟಿ ಕೊಡುತ್ತಿದ್ದಾರೆ ಎಂದು ದೂರಿದರು.


Spread the love

LEAVE A REPLY

Please enter your comment!
Please enter your name here