ಗಂಜಿ ಬಸವೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಕಳಸಾರೋಹಣ, ಶ್ರೀನಂದಿ ಧ್ವಜಾರೋಹಣ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಉಸುಗಿನಗಟ್ಟಿ ಓಣಿಯ ಶ್ರೀ ಗಂಜಿ ಬಸವೇಶ್ವರ ದೇವರ 63ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಎಪ್ರಿಲ್ 26ರಂದು ಬೆಳಿಗ್ಗೆ 8.30ಕ್ಕೆ ಸಿದ್ರಾಮಪ್ಪ ಹುಂಬಿ ಇವರ ಮನೆಯಿಂದ ಕಳಸದ ಭವ್ಯ ಮೆರವಣಿಗೆಯೊಂದಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗದ ಮಾಜಿ ಅಧ್ಯಕ್ಷ ಎಮ್.ಎಸ್. ಕರಿಗೌಡ್ರ ಇವರ ಅಮೃತಹಸ್ತದಿಂದ ಕಳಸಾರೋಹಣ ಕಾರ್ಯಕ್ರಮ ನೆರವೇರುವುದು.

Advertisement

ಇದೇ ಸಂದರ್ಭದಲ್ಲಿ ವಿಶ್ರಾಂತ ಸಹಾಯಕ ತೋಟಗಾರಿಕೆ ನಿರ್ದೇಶಕ ಸುರೇಶ ವ್ಹಿ.ಕುಂಬಾರರ ಅಮೃತ ಹಸ್ತದಿಂದ ಶ್ರೀನಂದಿ ಧ್ವಜಾರೋಹಣ ನೆರವೇರುವುದು. ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಾತ್ರಾ ಕಮಿಟಿಯ ಪದಾಧಿಕಾರಿಗಳು, ಸರ್ವ ಸದಸ್ಯರು ವಿನಂತಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here