ಬೆಂಗಳೂರು:- ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಕಮಲ್ ಹಾಸನ್ ಹೇಳಿಕೆಗೆ ನವರಸ ನಾಯಕ ಜಗ್ಗೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ X ಮಾಡಿರುವ ಅವರು, ಕಲೆಗೆ ಜಾತಿ ಇಲ್ಲ. ಎಲ್ಲಾ ಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ ಅವರನ್ನು ಮೆಚ್ಚಿದ್ದೇವೆ. ಹಾಗಂತ ಕನ್ನಡ ತಮಿಳಿಂದ ಹುಟ್ಟಿದೆ ಎಂಬ ಅವರ ಮಾತು ಒಪ್ಪಲ್ಲ. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷದ ಇತಿಹಾಸವಿದೆ. ಅಷ್ಟೆ ಯಾಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್ ಎಂದು ಜಗ್ಗೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇನ್ನೂ ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದಷ್ಟೇ ಅಲ್ಲ, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಇಲ್ಲದಿದ್ರೆ ‘ಥಗ್ ಲೈಫ್’ ಸಿನಿಮಾಗೆ ತಡೆ ನೀಡೋದಾಗಿ ಅವರ ಚಿತ್ರಗಳನ್ನು ಬ್ಯಾನ್ ಮಾಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಕೆ ನೀಡಿದೆ.