ಕಮಲ್ ಹಾಸನ್ ಗೆ ಕೊಲೆ ಬೆದರಿಕೆ: ದೂರು ದಾಖಲು

0
Spread the love

ನಟ ಕಮಲ್ ಹಾಸನ್ ಇತ್ತೀಚೆಗೆ ಸಿನಿಮಾಗಳಿಗಿಂತ ಹೆಚ್ಚಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿ ಆಗುತ್ತಿದ್ದಾರೆ. ಕಮಲ್‌ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಕನ್ನಡದ ಬಗ್ಗೆ ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಕಮಲ್‌ ಇದೀಗ ಸನಾತನ ಧರ್ಮದ ಬಗ್ಗೆ ಮಾತನಾಡಿ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

Advertisement

ಕಳೆದ ಕೆಲ ದಿನಗಳ ಹಿಂದೆ ನಟ ಸೂರ್ಯ ಅವರ ಅಗರಂ ಫೌಂಡೇಶನ್​ನ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ಕಮಲ್ ಹಾಸನ್, ಶಿಕ್ಷಣದ ಶಕ್ತಿ ಬಗ್ಗೆ ಮಾತನಾಡುತ್ತಾ, ‘ಗ ಯುದ್ಧ ನಡೆಯುತ್ತಿದೆ. ಈ ಯುದ್ಧವನ್ನು ಕೇವಲ ಶಿಕ್ಷಣದಿಂದ ಮಾತ್ರವೇ ಗೆಲ್ಲಲು ಸಾಧ್ಯ. ಸರಪಳಿಗಳನ್ನು ಒಡೆಯುವ ಆಯುಧ ಶಿಕ್ಷಣವೊಂದೇ, ಸರ್ವಾಧಿಕಾರಿ ಹಾಗೂ ಸನಾತನವನ್ನು ಸೋಲಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರವೇ ಇದೆ’ ಎಂದಿದ್ದರು.

ಕಮಲ್ ಹಾಸನ್ ಅವರ ಈ ಹೇಳಿಕೆಗೆ ವಿರೋಧ ವ್ಯಕ್ತವಾಗಿತ್ತು, ತಮಿಳುನಾಡು ಬಿಜೆಪಿ ನಾಯಕರು ಕಮಲ್ ಹಾಸನ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ ತಮಿಳುನಾಡಿನಲ್ಲಿ ಕಮಲ್ ಹಾಸನ್ ಸಿನಿಮಾಗಳ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದರು. ಅದರ ಬೆನ್ನಲ್ಲೆ ಇದೀಗ ಹೇಳಿಕೆಗೆ ಪ್ರತಿಯಾಗಿ, ಕಮಲ್ ಹಾಸನ್​ಗೆ ಕೊಲೆ ಬೆದರಿಕೆ ಬಂದಿದೆ.

ತಮಿಳು ಟಿವಿ ನಟ ರವಿಚಂದ್ರನ್ ಎಂಬುವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗಿ ಆಗಿದ್ದಾಗ, ಕಮಲ್ ಹಾಸನ್, ಸನಾತನ ಧರ್ಮದ ಬಗ್ಗೆ ಆಡಿರುವ ಮಾತನ್ನು ಪ್ರಸ್ತಾಪಿಸಿ, ‘ಕಮಲ್ ಹಾಸನ್ ಕತ್ತು ಕತ್ತರಿಸುತ್ತೇವೆ’ ಎಂದಿದ್ದರು. ರವಿಚಂದ್ರನ್ ಹೇಳಿಕೆ ವಿರುದ್ಧ ಕಮಲ್ ಹಾಸನ್ ಅವರ ಮಕ್ಕಳ್ ನಿಧಿ ಮಯಂ ಪಕ್ಷದ ಕಾರ್ಯಕರ್ತರು ಚೆನ್ನೈ ಪೊಲೀಸರಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದರು.


Spread the love

LEAVE A REPLY

Please enter your comment!
Please enter your name here