ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನ ಪ್ರಾರಂಭವಾದ ತಕ್ಷಣ, ರಾಜ್ಯಸಭಾ ಸದಸ್ಯರಾಗಿ ನಟ–ರಾಜಕಾರಣಿ ಕಮಲ್ ಹಾಸನ್ ತಮಿಳಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಾಣ ವಚನ ಸ್ವೀಕಾರಕ್ಕೂ ಮುನ್ನ ಮಾತನಾಡಿದ ಅವರು,
ರಾಜ್ಯಸಭಾ ಸದಸ್ಯನಾಗಿ ನಾನು ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಮತ್ತು ನನ್ನ ಹೆಸರನ್ನು ನೋಂದಾಯಿಸಲಿದ್ದೇನೆ. ಒಬ್ಬ ಭಾರತೀಯನಾಗಿ, ನಾನು ನನ್ನ ಕರ್ತವ್ಯವನ್ನು ಮಾಡುತ್ತೇನೆ ಎಂದು ಹೇಳಿದರು. ಡಿಎಂಕೆ ನೇತೃತ್ವದ ಮೈತ್ರಿಕೂಟದ ಬೆಂಬಲದೊಂದಿಗೆ ಜೂನ್ನಲ್ಲಿ ಹಾಸನ್ ಅವರಿಗೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು.
2024 ರ ಲೋಕಸಭಾ ಚುನಾವಣೆಗೆ ಮುನ್ನ ಅವರ ಪಕ್ಷವಾದ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಡಿಎಂಕೆ ನೇತೃತ್ವದ ಬಣಕ್ಕೆ ಸೇರಿದ ನಂತರ, ಹಾಸನ್ ಅವರಿಗೆ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸುವ ಅಥವಾ ರಾಜ್ಯಸಭಾ ನಾಮನಿರ್ದೇಶನವನ್ನು ಸ್ವೀಕರಿಸುವ ಆಯ್ಕೆಯನ್ನು ನೀಡಲಾಯಿತು. ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಅವರ ಪಕ್ಷವು ಡಿಎಂಕೆ–ಕಾಂಗ್ರೆಸ್ ಮೈತ್ರಿಕೂಟಕ್ಕೆ ಸಂಪೂರ್ಣ ಬೆಂಬಲ ನೀಡಿದ್ದರೂ ಸಹ, ಅವರು ರಾಜ್ಯಸಭಾ ಸದಸ್ಯತ್ವವನ್ನು ಆರಿಸಿಕೊಂಡರು.