ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನ ಕನಕದಾಸರ ಸಾಹಿತ್ಯ ಪ್ರಚಾರ ಸಮಿತಿಯ ಸಹಯೋಗದೊಂದಿಗೆ ಮಾ. 1ರಂದು ಬೆಳಗ್ಗೆ 9.30ಕ್ಕೆ ನಗರದ ಕನಕ ಭವನದಲ್ಲಿ ಕನಕ ಸಾಹಿತ್ಯ ಸಂಭ್ರಮ ಹಾಗೂ 100ನೇ ಉಪನ್ಯಾಸದ ವೇದಿಕೆಯ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಮಕೃಷ್ಣ ಯೋಗಾಶ್ರಮದ ಜಗದ್ಗುರು ಸ್ವಾಮಿ ಯೋಗೇಶ್ವರಾನಂದ ಸ್ವಾಮೀಜಿ, ಮನಸೂರ ಜ. ಡಾ. ಬಸವರಾಜ ದೇವರು ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕೀರಪ್ಪ ಹೆಬಸೂರ ಅಧ್ಯಕ್ಷತೆ ವಹಿಸುವರು. ಹಾಲುಮತ ಭಾಸ್ಕರ ರಾಜ್ಯ ಕನಕಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಲಿಂಗದಾಳ ಹಾಲಪ್ಪ ಕಾರ್ಯಕ್ರಮ ಉದ್ಘಾಟನೆ ಮಾಡುವರು.
ಕೆ.ಎಚ್. ಪಾಟೀಲ ಕಾಲೇಜು ಪ್ರಾಧ್ಯಾಪಕಿ ಡಾ. ಸುಧಾ ಕೌಜಗೇರಿ ಉಪನ್ಯಾಸ ನೀಡುವರು. ಹಸ್ತಪ್ರತಿ ಶಾಸ್ತ್ರ ಪ್ರಾಧ್ಯಾಪಕ ಪ್ರೊ. ಎಫ್.ಟಿ. ಹಳ್ಳಿಕೇರಿ, ಮಂಜುನಾಥ ಹೊನ್ನಣ್ಣವರ, ಡಾ. ಹನಮಗೌಡ ಪಾಟೀಲ, ವಾಸಣ್ಣ ಕುರಡಗಿ, ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ರವಿ ದಂಡಿನ, ಪ್ರಕಾಶ ಕರಿ, ಸುರೇಶ ಕೊಪ್ಪದ, ರಾಜಶೇಖರ ಕಲ್ಲೂರ, ಸಿದ್ಧಲಿಂಗ ಬಂಡು, ಆರ್.ಎಸ್. ಬುರಡಿ, ರಾಮಕೃಷ್ಣ ರೊಳ್ಳಿ ಮುಂತಾದವರು ಭಾಗವಹಿಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಆರ್.ಜಿ. ಕಲ್ಲೂರ, ಬಿ.ಎಸ್. ಕೆರಿ, ಈರಪ್ಪ ಹಳ್ಯಾಳ, ಸಿದ್ದು ಸತ್ಯಣ್ಣವರ, ಪ್ರೊ. ಮಾರುತಿ ಮಡ್ಡಿ, ಸಿದ್ಧಲಿಂಗೇಶ್ವರ ಯಂಡಿಗೇರಿ, ಹೇಮಂತ ಗಿಡ್ಡಹಣ್ಣಮನವರ, ಸೋಮನಗೌಡ ಪಾಟೀಲ, ಮುತ್ತು ಜಡಿ, ರಾಘು ವಗ್ಗನವರ ಇತರರು ಇದ್ದರು.
ಇದೇ ಸಂದರ್ಭದಲ್ಲಿ ಗದಗ, ರೋಣ, ಮುಂಡರಗಿ, ನರಗುಂದ, ಶಿರಹಟ್ಟಿ, ಲಕ್ಷ್ಮೇಶ್ವರ ಮತ್ತು ಗಜೇಂದ್ರಗಡ ಪದವಿಪೂರ್ವ ಕಾಲೇಜಿನ ಮತ್ತು ಪ್ರೌಢಶಾಲೆಯ ಹಂತದ ಕನಕದಾಸರ ಸಾಹಿತ್ಯ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ 76ರಿಂದ 100ನೇ ಆನ್ಲೈನ್ ಗೂಗಲ್ ಮೀಟ್ನಲ್ಲಿ ಕನಕದಾಸರ ಸಾಹಿತ್ಯದ ಉಪನ್ಯಾಸ ನೀಡಿದವರಿಗೆ ಸನ್ಮಾನ ಮಾಡಲಾಗುತ್ತದೆ. ಕನಕದಾಸರ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ 42 ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಮಾಣ ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಫಕೀರಪ್ಪ ಹೆಬಸೂರ ತಿಳಿಸಿದರು.



