ರಾಮನಗರ:- ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಕನಕಪುರದ ತಾಲೂಕಿನ ಕಾಡುಶಿವನಹಳ್ಳಿ ಬಳಿ ಬಂದಿರುವ 40 ಕಾಡಾನೆಗಳು, ಅಕ್ಕಪಕ್ಕದ ಜಮೀನುಗಳಲ್ಲಿ ದಾಂಧಲೆ ನಡೆಸಿವೆ. ಶನಿವಾರ ಸಂಜೆ ಗ್ರಾಮದ ಹೊರವಲಯದಲ್ಲಿ ಕಾಡಾನೆ ಹಿಂಡು ನೋಡಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ರಾತ್ರಿ ಕಾಡಾನೆಗಳನ್ನ ವಾಪಸ್ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟೊಟ್ಟಿಗೆ 40 ಕಾಡಾನೆಗಳು ಓಡಾಡುವ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಮೊಬೈಲ್‌ನಲ್ಲಿ ಸೆರೆಯಾಗಿದೆ.



