ವಿಜಯಸಾಕ್ಷಿ ಸುದ್ದಿ, ಗದಗ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಣವಿ ಸರ್ಕಾರಿ ಪ್ರೌಢಶಾಲೆ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಶಾಲೆಯ ಫಲಿತಾಂಶ ಶೇ. 78 ಆಗಿದ್ದು, 3 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮಲ್ಲಪ್ಪ ಶರಣಪ್ಪ ಬೋಳನವರ (ಶೇ. 96.8) ಪ್ರಥಮ, ಲಕ್ಷ್ಮೀ ಗಾರವಾಡ (ಶೇ. 91.84) ದ್ವಿತೀಯ ಮತ್ತು ರಂಜಿತಾ ಕಣವಿ (ಶೇ. 88.16) ತೃತಿಯ ಸ್ಥಾನ ಪಡೆದು ಶಾಲೆಗೆ ಮತ್ತು ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ.
Advertisement
ಸಾಧಕ ವಿದ್ಯಾರ್ಥಿಗಳನ್ನು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಊರಿನ ಹಿರಿಯರು ಮತ್ತು ಶಿಕ್ಷಣ ಪ್ರೇಮಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.