ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಟ ಮಾಡಿದ ಆರೋಪದ ಮೇಲೆ ಮಾಣಿಕ್ಯ, ಪಟಾಕಿ ಚಿತ್ರ ಖ್ಯಾತಿಯ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. 14.8 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ DRI ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ನಟಿ ರನ್ಯಾ ರಾವ್ ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿದ್ದಾರೆ.
ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ನ ಡಿಆರ್ಐ ಅಧಿಕಾರಿಗಳು ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪ ರನ್ಯಾ ಮೇಲೆ ಇದೆ.
ರನ್ಯಾ ಜನಿಸಿದ್ದು 1991ರಲ್ಲಿ. ಅವರು ಮೂಲತಃ ಚಿಕ್ಕಮಗಳೂರಿನವರು. ನಟನಾ ವೃತ್ತಿ ಆರಂಭಿಸಲು ಬೆಂಗಳೂರಿಗೆ ಬಂದರು. ನಂತರ ಕನ್ನಡದ ‘ಮಾಣಿಕ್ಯ’ ಹಾಗೂ “ಪಟಾಕಿ” ಚಿತ್ರದ ನಾಯಕಿಯಾಗಿ ನಟಿಸಿದ್ದರು.



