ಲಕ್ಷ್ಮೇಶ್ವರ: ಲಕ್ಷ್ಮೇಶ್ವರದ ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಂಡಿರುವ `ಕನ್ನಡ ಹಬ್ಬ’ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಶನಿವಾರ ಕನ್ನಡದ ಹಾಡುಗಳಿಗೆ ನೃತ್ಯ ಸಂಯೋಜಿಸಿ ಕುಣಿದು ಸಂಭ್ರಮಿಸಿದರು. ಈ ವೇಳೆ ಪ್ರಾಚಾರ್ಯ ಡಾ. ಪರಶುರಾಮ ಬಾರ್ಕಿ, ಕನ್ನಡ ಪ್ರಾಧ್ಯಾಪಕ ಸೋಮಶೇಖರ ಕೆರಿಮನಿ ಸೇರಿ ಕಾಲೇಜಿನ ಪ್ರಾಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಪತ್ರಕರ್ತರು ನೃತ್ಯ ಸಂಭ್ರಮಕ್ಕೆ ಕನ್ನಡ ಧ್ವಜ ಬೀಸುವ ಮೂಲಕ ಚಾಲನೆ ನೀಡಿದರು.
Trending Now



