ಬಳ್ಳಾರಿ: ರಾಜ್ಯದ ಎಲ್ಲಾ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯವಾಗಲಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
Advertisement
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಅವರು, ಮುಂದಿನ 90 ದಿನಗಳೊಳಗೆ ಮದರಸಾಗಳಲ್ಲಿ ಕನ್ನಡ ಕಲಿಯುವಂತೆ ಆದೇಶ ಹೊರಡಿಸಲಾಗುವುದೆಂದು ತಿಳಿಸಿದರು. ಇದಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಅವರ ನೇತೃತ್ವದಲ್ಲಿ ಕನ್ನಡ ಪಾಠ ಕಲಿಸುವ ವ್ಯವಸ್ಥೆ ರೂಪಿಸಲಾಗಿದೆ ಎಂದು ಹೇಳಿದರು.
“ಕರ್ನಾಟಕದಲ್ಲಿದ್ದು ಕನ್ನಡ ಕಲಿಯದೇ ಇದ್ದರೆ ಅರ್ಥವಿಲ್ಲ. ಸ್ವಾತಂತ್ರ್ಯ ಪೂರ್ವದ ಉರ್ದು ಶಾಲೆಗಳಲ್ಲಿ ಮೂರು ಭಾಷೆಗಳು ಕಡ್ಡಾಯವಾಗಿದ್ದವು. ಇದೇ ಮಾದರಿಯಲ್ಲಿ ಈಗ ಕನ್ನಡವನ್ನು ಮೊದಲ ಭಾಷೆಯಾಗಿ, ಉರ್ದುವನ್ನು ಎರಡನೇ ಭಾಷೆಯಾಗಿ, ಇಂಗ್ಲಿಷ್ ಅನ್ನು ಮೂರನೇ ಭಾಷೆಯಾಗಿ ಆಯ್ಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.


