ಕನ್ನಡ ರಾಜ್ಯೋತ್ಸವ ದಿನ ಕರಾಳ ದಿನಾಚರಣೆ: 1,500 MES ಪುಂಡರ ಮೇಲೆ ದೂರು ದಾಖಲು

0
Spread the love

ಬೆಳಗಾವಿ: ನವೆಂಬರ್‌ 1ರಂದು ‘ಕರಾಳ ದಿನ’ ಆಚರಣೆಗೆ ಬೆಳಗಾವಿ ಜಿಲ್ಲಾಡಳಿತ ನಿಷೇಧ ಹೇರಿದ ಬಳಿಕವೂ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಗರದಲ್ಲಿ ಬೃಹತ್ ‘ಕರಾಳ ದಿನ’ ರ್‍ಯಾಲಿ ನಡೆಸಿದೆ. ಈ ಹಿನ್ನೆಲೆಯಲ್ಲಿ 46 ಜನ ಮುಖಂಡರು ಸೇರಿದಂತೆ 1,500 ಜನರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement

ಮಾಜಿ ಶಾಸಕ ಮನೋಹರ ಕಿಣೇಕರ, ಎಮ್ಇಎಸ್ ಮುಖಂಡ ಶುಭಂ ಶಳಕೆ, ರಮಾಕಾಂತ ಕೊಂಡುಸ್ಕರ, ವಿಕಾಸ ಕಲಘಟಗಿ ಶಿವಸೇನೆ ಮುಖಂಡ ಪ್ರಕಾಶ ಮರಗಾಳೆ ಸೇರಿದಂತೆ 46 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿದ್ದ ದಿನಾಚರಣೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಮರಾಠಿ ಪರ ಕಾರ್ಯಕರ್ತರು ಕಪ್ಪು ವಸ್ತ್ರ ಧರಿಸಿ ಪಾಲ್ಗೊಂಡಿದ್ದು ಕಂಡು ಬಂದಿತ್ತು. ಬೆಳಗಾವಿ, ನಿಪ್ಪಾಣಿ, ಖಾನಾಪುರ, ಕಾರವಾರ, ಬೀದರ್ ಮತ್ತು ಭಾಲ್ಕಿಯನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದರು.


Spread the love

LEAVE A REPLY

Please enter your comment!
Please enter your name here