ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ: ಕಮಲ್ ಹಾಸನ್ ಹೇಳಿಕೆಗೆ ಭುಗಿಲೆದ್ದ ಆಕ್ರೋಶ..ನಟನ ಭಾವಚಿತ್ರ ಸುಟ್ಟಿದ ಪ್ರತಿಭಟನಾಕಾರರು!

0
Spread the love

ರಾಯಚೂರು:- ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Advertisement

ಕರ್ನಾಟಕದ ಹಲವೆಡೆ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ಅದರಂತೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಪ್ರತಿಭಟನೆ ನಡೆಸಿದರು. ಹಾಗೂ ಕಮಲ್ ಹಾಸನ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಭಾಷಾ ಅಂಧತೆ ಮೆರೆದಿರುವ ಕಮಲ್ ಹಾಸನ್ ಕನ್ನಡಿಗರಿಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಕಮಲ್ ಹಾಸನ್ ನಟನೆಯ ತಮಿಳು ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಕನ್ನಡಪರ ಸಂಘಟನೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here