ಉದ್ಯೋಗದಲ್ಲಷ್ಟೆ ಅಲ್ಲ RCB ತಂಡದಲ್ಲೂ ಕನ್ನಡಿಗರಿಗೆ ಸಿಗಲಿ ಮೀಸಲಾತಿ: ಫ್ಯಾನ್ಸ್ ಆಗ್ರಹ!

0
Spread the love

ಉದ್ಯೋಗದಲ್ಲಷ್ಟೆ ಅಲ್ಲ RCB ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ಸಿಗಲಿ ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.

Advertisement

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲಿ ಪ್ರತಿ ಬಾರಿಯೂ ಕನ್ನಡಿಗ ಆಟಗಾರರಿಗೆ ಅವಕಾಶ ನೀಡುವುದಿಲ್ಲ. ಒಂದೆಡರು ಮಂದಿಯನ್ನು ಹರಾಜಿನಲ್ಲಿ ಖರೀದಿ ಮಾಡಿದರೂ ಕೂಡ ಇವರಿಗೆ ಆಡುವ ಅವಕಾಶ ನೀಡದೆ ಕೇವಲ ಬೆಂಚ್​ ಕೂರಿಸಿಯೇ ಬಿಡುತ್ತಾರೆ. ಪ್ರತಿ ಬಾರಿ ಹರಾಜು ನಡೆದಾಗಲೂ ಆರ್​ಸಿಬಿ ಅಭಿಮಾನಿಗಳು ಕನ್ನಡಿಗ ಆಟಗಾರರ ಕಡೆಗಣನೆಯ ಬಗ್ಗೆ ಫ್ರಾಂಚೈಸಿ ವಿರುದ್ಧ ಆಕ್ರೋಶ ಹೊರಹಾಕುತ್ತಲೇ ಇರುತ್ತಾರೆ. ಇದೀಗ ಕರ್ನಾಟಕದಲ್ಲಿ ಖಾಸಗಿ ಕೈಗಾರಿಕೆಗಳಲ್ಲಿ ಸರ್ಕಾರ ಮೀಸಲಾತಿ ಜಾರಿಗೆ ತರುವ ಚಿಂತನೆ ನಡೆಸಿದ ಬೆನ್ನಲ್ಲೇ ಐಪಿಎಲ್​ನಲ್ಲಿ ಆರ್​ಸಿಬಿ ತಂಡದಲ್ಲಿಯೂ ಶೇ 50ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

ಆರ್​ಸಿಬಿಯ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೀಸಲಾತಿ ಜಾರಿ ಮಾಡುವಂತೆ ಹಲವು ಟ್ವೀಟ್​ ಮಾಡಲಾರಂಭಿಸಿದ್ದಾರೆ. ಐಪಿಎಲ್​ ಆರಂಭವಾಗಿ 17 ಆವೃತ್ತಿ ಕಳೆದರೂ ಕೂಡ ಆರ್​ಸಿಬಿ ಕಪ್​ ಗೆದ್ದಿಲ್ಲ. ನಮ್ಮ ರಾಜ್ಯದ ಅದೆಷ್ಟೋ ಸ್ಟಾರ್​ ಆಟಗಾರರಿದ್ದರೂ ಕೂಡ ಅವರನ್ನು ಆರ್​ಸಿಬಿ ಖರೀದಿ ಮಾಡದೆ ಸರಿಯಾಗಿ ಆಡಲು ಬಾರದ ಆಟಗಾರರಿಗೆ ಅತ್ಯಧಿಕ ಮೊತ್ತದ ಬಿಡ್​ ಮಾಡಿ ತಂಡ ಸೇರಿಸಿಕೊಳ್ಳುತ್ತಿದೆ. ಈ ಬಾರಿಯ ಮೆಗಾ ಹರಾಜಿನಲ್ಲಾದರು ಕನ್ನಡಿಗ ಆಟಗಾರರಿಗೆ ಅವಕಾಶ ನೀಡಲಿದೆಯಾ ಎಂದು ಕಾದು ನೋಡಬೇಕಿದೆ.


Spread the love

LEAVE A REPLY

Please enter your comment!
Please enter your name here