ಇಂದು ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ಗ್ರ್ಯಾಂಡ್ ರಿಲೀಸ್; ಮೊದಲ ದಿನವೇ ಜನರಿಂದ ಭರ್ಜರಿ ರೆಸ್ಪಾನ್ಸ್!

0
Spread the love

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾ ಇಂದು ಪ್ರಪಂಚದಾದ್ಯಂತ ಬಿಡುಗಡೆ ಆಗಿದೆ.

Advertisement

ಸಿನಿಮಾದ ಪ್ರೀಮಿಯರ್ ಶೋಗಳು ದೇಶದ ಹಲವು ಪ್ರಮುಖ ನಗರಗಳಲ್ಲಿ ನಿನ್ನೆಯೇ ನಡೆದಿವೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಮೊದಲ ಶೋ ನೋಡಿದ ಜನ ರಿಷಬ್ ಶೆಟ್ಟಿ ಮಾಡಿರುವ ಮೋಡಿಗೆ ಮಾರು ಹೋಗಿದ್ದಾರೆ. ಸಿನಿಮಾ ನೋಡಿ ಹೊರಬಂದ ವೀಕ್ಷಕರೆಲ್ಲರೂ ಸಿನಿಮಾ ಬಗ್ಗೆ ಒಳ್ಳೆಯ ಮಾತುಗಳನ್ನೇ ಆಡಿದ್ದಾರೆ.

ಕಾಂತಾರ: ಚಾಪ್ಟರ್ 1′ ಸಿನಿಮಾದಲ್ಲಿ ನಿರ್ದೇಶಕ, ನಟ ರಿಷಬ್ ಶೆಟ್ಟಿ, ಕ್ರಿ.ಶ.4-5 ಶತಮಾನದ ಕದಂಬರ ಆಳ್ವಿಕೆಯ ಸಮಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಒಂದು ಮಾಯಾವಿ ಲೋಕವನ್ನು ನೋಡುಗನ ಮುಂದಿರಿಸಿದ್ದಾರೆ.

ದುಬಾರಿ ಟಿಕೆಟ್ ಬೆಲೆ ಮತ್ತು ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದುಬಂದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ಭಾರಿ ಕಲೆಕ್ಷನ್ ಮಾಡುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಇಂದು ಪ್ರೇಕ್ಷಕರ ಅಭಿಪ್ರಾಯ, ವಿಮರ್ಶೆಗಳೇ ತುಂಬಿಹೋಗಿವೆ.

ಕಳೆದ ರಾತ್ರಿ ಬೆಂಗಳೂರು ಸೇರಿದಂತೆ ಹಲವೆಡೆ ಪ್ರೀಮಿಯರ್ ಶೋ ಇಡಲಾಗಿದ್ದು, ಅದರಿಂದಲೇ ಕೋಟಿ ರೂಪಾಯಿ ಬಾಚಲಾಗಿದೆ. ‘ಕಾಂತಾರ: ಚಾಪ್ಟರ್ ’ ಸಿನಿಮಾಗೆ ರಿಷಬ್ ಶೆಟ್ಟಿ ನಾಯಕ. ನಿರ್ದೇಶನ ಕೂಡ ಅವರದ್ದೇ. ನಾಯಕಿ ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್, ಇತರ ಪ್ರಮುಖ ಪಾತ್ರವರ್ಗದಲ್ಲಿ ಜಯರಾಂ, ಕುಲ್ಶನ್ ದೇವಯ್ಯ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here