HomeEntertainment‘ಕಾಂತಾರ’ ಚಿತ್ರದ ಕಲಾವಿದರು ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: 6 ಜನರಿಗೆ ಗಂಭೀರ ಗಾಯ

‘ಕಾಂತಾರ’ ಚಿತ್ರದ ಕಲಾವಿದರು ತೆರಳುತ್ತಿದ್ದ ಮಿನಿ ಬಸ್ ಪಲ್ಟಿ: 6 ಜನರಿಗೆ ಗಂಭೀರ ಗಾಯ

For Dai;y Updates Join Our whatsapp Group

Spread the love

ಡಿವೈನ್ ಸ್ಟಾರ್ ರಿಷಬ್ ​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ ಚಾಪ್ಟರ್ 1 ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಬ್ಯುಸಿ ಶೆಡ್ಯೂಲ್ ನಲ್ಲಿ ಶೂಟಿಂಗ್ ನಡೆಸುತ್ತಿರುವ ಕಾಂತಾರ ಚಿತ್ರತಂಡಕ್ಕೆ ಶಾಕಿಂಗ್ ನ್ಯೂಸ್ ಕೇಳಿ ಬಂದಿದೆ. ಕಾಂತಾರ ಸಿನಿಮಾ ತಂಡದವರು ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಗಿದೆ. ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಕಾಂತಾರಾ ಶೂಟಿಂಗ್ ಗಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್​ ಪಲ್ಟಿ ಆಗಿದೆ. ಬಸ್​ನಲ್ಲಿ 20 ಜನ ಪ್ರಯಾಣಿಸುತ್ತಿದ್ದು ಅವರಲ್ಲಿ 6 ಜನರ ಸ್ಥಿತಿ ಗಂಭೀರವಾಗಿ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರಾವಳಿ ಸುತ್ತಮುತ್ತ ಕಾಂತಾರ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಜೂನಿಯರ್ ಕಲಾವಿದರನ್ನು ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. 20 ಜ್ಯೂನಿಯರ್ ಕಲಾವಿದರು ಬಸ್​ನಲ್ಲಿ ಪ್ರಯಾಣಿಸುತ್ತಿದ್ದು ಆ ಪೈಕಿ ಆರು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ವಿಜಯ್ ಕಿರಗಂದೂರು ಅವರು ‘ಕಾಂತಾರ: ಚಾಪ್ಟರ್​ 1’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆಗೆ ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ‘ಕಾಂತಾರ’ ಚಿತ್ರದ ಪ್ರೀಕ್ವೆಲ್​ ಆಗಿ ‘ಕಾಂತಾರ: ಚಾಪ್ಟರ್​ 1’ ಸಿನಿಮಾ ಮೂಡಿಬರುತ್ತಿದೆ. ಬಸ್​ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದ್ದು ಸದ್ಯದ ಮಟ್ಟಿಗೆ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!