ಬೆಳಗಾವಿ: ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡೋವರೆಗೂ ಕರವೇ ಹೋರಾಟ ಬಿಡುವುದಿಲ್ಲ ಎಂದು ಕರವೇ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
Advertisement
ಬೆಳಗಾವಿಯಲ್ಲಿ ಮಾತನಾಡಿದ ಅವರು, ಒಬ್ಬ ಚಾಲಕ, ನಿರ್ವಾಹಕರನ್ನು ಬಸ್ನಿಂದ ಕೆಳಗಿಳಿಸಿ ಬಣ್ಣ ಹಾಕಿ, ಅವರಿಗೆ ಹಾರ ಹಾಕಿ ಜೈ ಮಹಾರಾಷ್ಟ್ರ ಅಂತಾ ಘೋಷಣೆ ಕೂಗಿಸುತ್ತೀರಿ. ಇಡೀ ಬೆಳಗಾವಿಯಲ್ಲಿರುವ ಪ್ರತಿಯೊಬ್ಬ ಮರಾಠಿಗನ ಬಾಯಿಯಿಂದಲೂ ಕರ್ನಾಟಕಕ್ಕೆ ಜೈ ಎನಿಸುವ ಕಾಲ ಬೇಗ ಬರುತ್ತದೆ.
ಇದನ್ನೆಲ್ಲ ಬಿಟ್ಟು ಬಿಡಿ. ಬೆಳಗಾವಿಯಲ್ಲಿ ಎಂಇಎಸ್ ಸಂಪೂರ್ಣ ಅಂತ್ಯವಾಗಿದೆ. ಆ ಹೊಟ್ಟೆ ಉರಿಗೆ ಇಂಥ ಆಟ ಶುರು ಮಾಡಿದ್ದಾರೆ. ಬೆಳಗಾವಿ ಅಷ್ಟೇ ಅಲ್ಲದೇ ಇಡೀ ಕರ್ನಾಟಕದಲ್ಲಿ ಎಂಇಎಸ್ ಇಲ್ಲದಂತೆ ಮಾಡೋವರೆಗೂ ಕರವೇ ಹೋರಾಟ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.