ಕರೀಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ಹೃದಯಾಘಾತದಿಂದ ನಿಧನ!

0
Spread the love

ಕರೀಷ್ಮಾ ಕಪೂರ್ ಅವರ ಮಾಜಿ ಪತಿ ಹಾಗೂ ಖ್ಯಾತ ಉದ್ಯಮಿ ಸಂಜಯ್ ಕಪೂರ್ ಅವರು 53ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸಂಜಯ್‌ ಕಪೂರ್‌ ಯುಕೆಯಲ್ಲಿದ್ದರು. ಸೋನಾ ಕಾಮ್‌ಸ್ಟಾರ್ ಲಿಮಿಟೆಡ್‌ನ ಅಧ್ಯಕ್ಷರಾಗಿದ್ದರು.

Advertisement

ಕೈಗಾರಿಕೋದ್ಯಮಿ ಪೋಲೊ ಆಡುತ್ತಿದ್ದಾಗ ತೀವ್ರ ಹೃದಯಾಘಾತವಾಯಿತು. ಸಾವಿಗೂ ಮುನ್ನ ಸಂಜಯ್ ಅವರು ಅಹಮದಾಬಾದ್-ಲಂಡನ್ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸಿ ಪೋಸ್ಟ್‌ ಹಾಕಿದ್ದರು.‌

ಸಂಜಯ್ ಬಾಲಿವುಡ್ ನಟಿ ಕರಿಷ್ಮಾ ಅವರನ್ನು 2003 ರಲ್ಲಿ ವಿವಾಹವಾದರು. 2016 ರಲ್ಲಿ ವಿಚ್ಛೇದನ ಪಡೆದರು. ಅವರಿಗೆ ಮಗಳು ಸಮೈರಾ ಮತ್ತು ಮಗ ಕಿಯಾನ್ ಇದ್ದಾರೆ. ಇಬ್ಬರೂ ಮಕ್ಕಳು ಕರಿಷ್ಮಾ ಅವರ ಜೊತೆಗಿದ್ದಾರೆ.

ಸಂಜಯ್ ನ್ಯೂಯಾರ್ಕ್‌ನಲ್ಲಿ ಭೇಟಿಯಾದ ಪ್ರಿಯಾ ಸಚ್‌ದೇವ್ ಅವರನ್ನು ಪ್ರೀತಿಸುತ್ತಿದ್ದರು. ಐದು ವರ್ಷಗಳ ಡೇಟಿಂಗ್ ನಂತರ, ಅವರು ದೆಹಲಿಯಲ್ಲಿ ವಿವಾಹವಾದರು. ದಂಪತಿಗೆ ಅಜಾರಿಯಾಸ್ ಕಪೂರ್ ಎಂಬ ಮಗನಿದ್ದಾನೆ.


Spread the love

LEAVE A REPLY

Please enter your comment!
Please enter your name here