ಉಡುಪಿ: ದೇಶದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರದ ಪ್ರಕರಣಗಳು ನಡೆಯುತ್ತಿರುವುದು ಅತ್ಯಂತ ಕಳವಳಕಾರಿ ಅಂಶವಾಗಿದೆ. ಜಿಲ್ಲೆಯ ಕಾರ್ಕಳ ತಾಲೂಕಿನ ಗೌಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಬ್ಬ ಹಿಂದೂ ಯುವತಿಯ ಮೇಲೆ ಅತ್ಯಾಚಾರ ನಡೆದಿದ್ದು, ಈ ಘಟನೆ ಸಂಬಂಧ ಆರೋಪಿಗಳನ್ನು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಆ.23 ರಂದು ಅತ್ಯಾಚಾರ ಆರೋಪ ಬೆಳಕಿಗೆ ಬಂದಿದ್ದು,
ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ಬಗ್ಗೆ ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾತನಾಡಿ, ಪ್ರಮುಖ ಆರೋಪಿಗಳಾದ ಅಲ್ತಾಫ್, ರಿಚರ್ಡ್ನನ್ನು ಪೊಲೀಸ್ ಕಸ್ಟಡಿಗೆ ಕಾರ್ಕಳ ನಗರಠಾಣೆ ಪೊಲೀಸರು ಕೇಳಿದ್ದರು. ನಾಲ್ಕು ದಿನ ಪೊಲೀಸ್ ಕಸ್ಟಡಿಯಲ್ಲಿ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಲಾಗುವುದು ಎಂದರು. ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ.
ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರ ಕರೆಸಿ ಬಿಯರ್ ಬಾಟಲಿ ತರಿಸಿದ್ದ. ಬಿಯರ್ನಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಸಿದ ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.