HomeBengaluru Newsಶನಿವಾರ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಬಂದ್‌ಗೆ ಯಾರ್, ಯಾರ್ ಬೆಂಬಲ ನೀಡ್ತಿದ್ದಾರೆ?

ಶನಿವಾರ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಬಂದ್‌ಗೆ ಯಾರ್, ಯಾರ್ ಬೆಂಬಲ ನೀಡ್ತಿದ್ದಾರೆ?

For Dai;y Updates Join Our whatsapp Group

ಬೆಂಗಳೂರು: ಮಾರ್ಚ್ 22 ಅಂದ್ರೆ ಇದೇ ಶನಿವಾರ ಮರಾಠಿ ಪುಂಡರ ವಿರುದ್ಧ ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಶನಿವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬೃಹತ್ ಹೋರಾಟ ನಡೆಸುವುದಕ್ಕೆ ವಾಟಾಳ್ ನಾಗರಾಜ್ ಕರೆನೀಡಿದ್ದು ಈ ಹೋರಾಟಕ್ಕೆ ಹಲವು ಸಂಘಟನೆಗಳು ಬೆಂಬಲ ಸೂಚಿಸುವೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಮಾರ್ಚ್ 22ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಬಂದ್ ಆಗುವುದು ನಿಶ್ಚಿತ. ಬೆಳಗ್ಗೆ 10:30ಕ್ಕೆ ಟೌನ್ ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ಮಾಡುತ್ತೇವೆ. ಹೀಗಾಗಿ ನಿಮ್ಮ ಸ್ವಾಭಿಮಾನಕ್ಕಾಗಿ ಯಾರು ವಾಹನ ಹತ್ತಬೇಡಿ ಎಂದು ಸಾರ್ವಜನಿಕರಿಗೆ ವಾಟಾಳ್‌ ನಾಗರಾಜ್‌ ಮನವಿ ಮಾಡಿದ್ದಾರೆ.

ವಾಟಾಳ್ ನಾಗರಾಜ್ ನೇತೃತ್ವದ ಹೋರಾಟಗಾರರು ಸುಮಾರು 2,000 ಸಂಘಟನೆಗಳ ಬೆಂಬಲ ಇದೆ ಎಂದಿದಾರೆ.

ಆದರೆ ಸಂಘಟನೆಗಳ ನಾಯಕರಿಂದ ಮಾತ್ರ ಬಂದ್ಗೆ ಬೆಂಬಲ ಇದ್ದು, ಸಂಘಟನೆಗಳ ಕಾರ್ಯಕರ್ತರು, ಚಾಲಕರಿಂದ ಬೆಂಬಲ ಇಲ್ಲ ಎನ್ನಲಾಗುತ್ತಿದೆ.

ಬೆಳಗಾವಿಯಿಂದ ಎಂಇಎಸ್ ಅನ್ನು ಒದ್ದು ಓಡಿಸಬೇಕೋ ಬೇಡ್ವೋ? ಬೆಳಗಾವಿ ಘಟನೆ ಕಣ್ಣಿಗೆ ಚಿಕ್ಕದಾಗಿರಬಹುದು. ಆದ್ರೆ ನಮ್ ಕಣ್ಣಿಗೆ ಇದು ಬೆಟ್ಟ. ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಇದೆ. ಮಹಾರಾಷ್ಟ್ರದಲ್ಲಿ ನಮ್ಮ ಕನ್ನಡಿಗರ ಪ್ರತಿಮೆ ಇಲ್ಲ. ಕರ್ನಾಟಕದಲ್ಲಿ ತಮಿಳು, ತೆಲಗು, ಮಾರ್ವಾಡಿ, ಮಲೆಯಾಳಿಗರು ಬೇಕಾ? ಎಂದು ವಾಟಾಳ್ ಪ್ರಶ್ನಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img