ಕರ್ನಾಟಕ ಬಂದ್: ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ – 30ಕ್ಕೂ ಅಧಿಕ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

0
Spread the love

ಬೆಳಗಾವಿ: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು 12 ಗಂಟೆಗಳ ಕಾಲ ಕರ್ನಾಟಕ ಬಂದ್‌ ಆಚರಿಸುತ್ತಿವೆ.  ರಾಜ್ಯದ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು,

Advertisement

ಇನ್ನೂ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಚೆನ್ನಮ್ಮ ವೃತ್ತ ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕನ್ನಡ ಒಕ್ಕೂಟ ಸಂಘದಿಂದ ನಡೆಯುತ್ತಿರುವ ಹೋರಾಟ ನಡೆಯುತ್ತಿದ್ದು, ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಬೆಳಗಾವಿ ಚನ್ನಮ್ಮ ವೃತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು, ಚನ್ನಮ್ಮ ವೃತ್ತದ ಧರಣಿ ಕುಳಿತು, ಬೊಬ್ಬೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸುತ್ತಿದ್ರು. ಈ ವೇಳೆ ಪೊಲೀಸರು ಮತ್ತು ಕರವೇ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಮೂವತ್ತಕ್ಕೂ ಅಧಿಕ ಕರವೇ ಕಾರ್ಯಕರ್ತರು ವಶಕ್ಕೆ ಪಡೆಯಲಾಗಿದೆ.

 


Spread the love

LEAVE A REPLY

Please enter your comment!
Please enter your name here