ಗದಗ:- ಬೆಳಗಾವಿಯಲ್ಲಿ ಎಂಇಎಸ್ ಪುಂಡರ ದೌರ್ಜನ್ಯ, ಕನ್ನಡ ಭಾಷಿಕರ ಮೇಲೆ ಮರಾಠಿಗರ ದೌರ್ಜನ್ಯ ಖಂಡಿಸಿ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿದ್ದಾರೆ. ಹಲವು ಸಂಘಟನೆಗಳು ಈ ಬಂದ್ ಗೆ ಬೆಂಬಲ ಕೊಟ್ಟಿವೆ.
ಅದರಂತೆ ಗದಗ ನಗರದ ಗಾಂಧಿ ವೃತ್ತದಲ್ಲಿ ಬೆಳ್ಳಂ ಬೆಳಗ್ಗೆ ಕರವೇ ಶಿವರಾಮೇಗೌಡ ಬಣದಿಂದ ಪ್ರತಿಭಟನೆ ನಡೆಸಲಾಗಿದೆ. ಗಾಂಧಿ ವೃತ್ತದಲ್ಲಿ ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗಿದ್ದು, ಮರಾಠಿಗರ ದೌರ್ಜನ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ವಾಟಾಳ್ ನಾಗರಾಜ್ ಅವರು ಕರೆ ನೀಡಿರುವ ಕರ್ನಾಟಕ ಬಂದ್ ಕೇವಲ ಪ್ರತಿಭಟನೆಗೆ ಸೀಮಿತವಾಗಿದೆ.



