ಬೆಂಗಳೂರು: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು 16.53 ಲಕ್ಷ ರೂಪಾಯಿ ಸಾಲ ಪಡೆದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಬ್ಯಾಂಕ್‌ನ ಚಿನ್ನ ಮೌಲ್ಯಮಾಪಕ ರವಿಕುಮಾರ್ ಸೇರಿದಂತೆ ನಾಲ್ವರ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿಯ ಪ್ರಕಾರ, ಚಿನ್ನ ಮೌಲ್ಯಮಾಪಕ ರವಿಕುಮಾರ್ ಕೆಲವು ನಕಲಿ ಗ್ರಾಹಕರೊಂದಿಗೆ ಸೇರಿಕೊಂಡು ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ತೋರಿಸಿ ಬ್ಯಾಂಕ್‌ಗೆ ವಂಚನೆ ಮಾಡಿದ್ದಾನೆ. ಬ್ಯಾಂಕ್‌ನ ನಿಯಮಿತ ಮೌಲ್ಯಮಾಪನ ಪ್ರಕ್ರಿಯೆಯನ್ನೇ ದುರುಪಯೋಗಪಡಿಸಿಕೊಂಡು ಈ ವಂಚನೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು, ನಕಲಿ ಗ್ರಾಹಕರಿಗೆ ಸಾಲ ಮಂಜೂರು ಮಾಡಿಸುವ ಮೂಲಕ ಬ್ಯಾಂಕ್‌ಗೆ ಆರ್ಥಿಕ ನಷ್ಟ ಉಂಟುಮಾಡಲಾಗಿದೆ. ನಂತರ ಬ್ಯಾಂಕ್ ಅಧಿಕಾರಿಗಳಿಗೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ವಂಚನೆ ಬಯಲಾಗಿದೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ವರ್ತೂರು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಚಿನ್ನ ಮೌಲ್ಯಮಾಪಕ ರವಿಕುಮಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.



