HomeBengaluru NewsKarnataka Cabinet Expansion: ಸಂಪುಟ ವಿಸ್ತರಣೆ ಮತ್ತೆ ವಿಳಂಬ, ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವ ಕಾಂಗ್ರೆಸ್!

Karnataka Cabinet Expansion: ಸಂಪುಟ ವಿಸ್ತರಣೆ ಮತ್ತೆ ವಿಳಂಬ, ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವ ಕಾಂಗ್ರೆಸ್!

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮತ್ತೆ ಒಂದೆರಡು ದಿನ ಮುಂದೂಡಿಕೆಯಾಗಿದೆ.

ಬುಧವಾರವೇ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದ್ದರೂ, ಹೈಕಮಾಂಡ್ ನಾಯಕರ ಲಭ್ಯತೆ ಕೊರತೆಯಿಂದ ಅಂತಿಮ ನಿರ್ಧಾರ ವಿಳಂಬವಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿಗೆ ಮರಳಲಿದ್ದು, ವಾರಾಂತ್ಯದಲ್ಲಿ ಮತ್ತೆ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ರಾತ್ರಿ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಂಧನದ ಬೆಳವಣಿಗೆಯಿಂದ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

“ಸಂಪುಟ ವಿಸ್ತರಣೆ ಮುಂದೂಡಲು ಇಷ್ಟವಿಲ್ಲ. ಆದರೆ ಅಂತಿಮ ತೀರ್ಮಾನ ಹೈಕಮಾಂಡ್ ನಿರ್ಧಾರದಂತೆ ನಡೆಯಲಿದೆ” ಎಂದು ಸಿಎಂ ಸ್ಪಷ್ಟಪಡಿಸಿದರು. ಹಿರಿಯರು ಮತ್ತು ಕಿರಿಯರಿಗೆ ಸಮಾನ ಅವಕಾಶ ನೀಡುವ ಉದ್ದೇಶವಿದೆ. ಖಾಲಿ ಇರುವ ಸ್ಥಾನಗಳನ್ನು ಸಾಧ್ಯವಾದಷ್ಟು ಭರ್ತಿ ಮಾಡುವ ಪ್ರಯತ್ನ ಮಾಡಲಾಗುವುದು ಎಂದರು.

ದೆಹಲಿಯಲ್ಲಿ ನಡೆಯಬೇಕಿದ್ದ ಸಭೆ ಮುಂದೂಡಿಕೆ:

ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು.

ಆದರೆ, ನೀಟ್ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಹೈಕಮಾಂಡ್ ಗಮನ ಆ ಬೆಳವಣಿಗೆಯತ್ತ ಕೇಂದ್ರೀಕೃತವಾಯಿತು. ಹೀಗಾಗಿ ಕರ್ನಾಟಕ ಸಂಪುಟ ವಿಸ್ತರಣೆ ಕುರಿತು ನಡೆಯಬೇಕಿದ್ದ ಚರ್ಚೆ ಮುಂದೂಡಿಕೆಯಾಯಿತು.

ಸುಮಾರು 20 ಮಂದಿಗೆ ಅವಕಾಶ ಸಾಧ್ಯತೆ:

ಸಂಪುಟ ವಿಸ್ತರಣೆಯಲ್ಲಿ ಹೊಸ ಮುಖಗಳು ಹಾಗೂ ಅನುಭವಿ ನಾಯಕರಿಗೆ ಸಮಾನ ಆದ್ಯತೆ ನೀಡುವ ಸಾಧ್ಯತೆ ಇದೆ. ಸುಮಾರು 10 ಹೊಸಬರು ಮತ್ತು 10 ಹಿರಿಯ ಶಾಸಕರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಚರ್ಚೆ ನಡೆಯುತ್ತಿದೆ.

ಮುಸ್ಲಿಂ ಸಮುದಾಯದಿಂದ ರಿಜ್ವಾನ್ ಅರ್ಷದ್, ಜಮೀರ್ ಅಹ್ಮದ್ ಖಾನ್, ತನ್ವೀರ್ ಸೇಠ್, ಸಲೀಂ ಅಹ್ಮದ್ ಹಾಗೂ ಖನೀಜ್ ಫಾತಿಮಾ ಅವರ ಹೆಸರುಗಳು ಕೇಳಿಬರುತ್ತಿದ್ದು, ಇವರಲ್ಲಿ ಮೂವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಲಿಂಗಾಯತ ಸಮುದಾಯದಿಂದ ಅಶೋಕ್ ಪಟ್ಟಣ, ಲಕ್ಷ್ಮಣ ಸವದಿ, ಕಾಶಪ್ಪನವರ್, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಯಶವಂತ್ ರಾಯಗೌಡ ಹಾಗೂ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ.

ಒಕ್ಕಲಿಗ ಸಮುದಾಯದಿಂದ ಶರತ್ ಬಚ್ಚೇಗೌಡ, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ, ಚಲುವರಾಯಸ್ವಾಮಿ ಹಾಗೂ ಪ್ರಿಯಾ ಕೃಷ್ಣ ಅವರ ಹೆಸರುಗಳು ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿವೆ.

ಮಹಿಳಾ ಕೋಟಾದಲ್ಲೂ ಎರಡು ಅಥವಾ ಮೂರು ಸ್ಥಾನ ನೀಡುವ ಕುರಿತು ಚರ್ಚೆ ನಡೆಯುತ್ತಿದ್ದು, ಆರತಿ ಕೃಷ್ಣ, ಲಕ್ಷ್ಮೀ ಹೆಬ್ಬಾಳ್ಕರ್, ಉಮಾಶ್ರೀ ಹಾಗೂ ನಯನಾ ಮೋಟಮ್ಮ ಅವರ ಹೆಸರುಗಳು ಕೇಳಿಬರುತ್ತಿವೆ.

ಸಂಪುಟ ವಿಸ್ತರಣೆ ಈ ವಾರದೊಳಗೆ ನಡೆಯುವ ಸಾಧ್ಯತೆ ಇದ್ದು, ಅಂತಿಮವಾಗಿ ಹೈಕಮಾಂಡ್ ಯಾರಿಗೆ ಅವಕಾಶ ನೀಡಲಿದೆ ಎಂಬುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img