ಬೆಂಗಳೂರು: ಶತಮಾನೋತ್ಸವ ಸಂಭ್ರಮದಲ್ಲಿರುವ RSS ಗೆ ಕರ್ನಾಟಕ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.
Advertisement
ರಾಜ್ಯದ ಸರ್ಕಾರಿ ಕಟ್ಟಡಗಳು ಮತ್ತು ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು ಚರ್ಚೆ ಎದ್ದಿದೆ.
ಐಟಿ ಮತ್ತು ಬಿಟಿ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು, ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ವಿನಂತಿ ಮಾಡಿದ್ದಾರೆ.
ಈ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಿ, ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈವರೆಗೆ ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಹೊರಡಿಸಲಾಗಿಲ್ಲ. ಆದೇಶ ಹೊರಬಿದ್ದರೆ ಮಾತ್ರ ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರೋದು ಖಚಿತ ಎನ್ನಲಾಗಿದೆ.