ಬೆಂಗಳೂರು: ಮಹಿಳೆಯರು, ಕೃಷಿ ವಲಯಕ್ಕೂ ಕೇಂದ್ರದಿಂದ ಯೋಜನೆ ತಂದಿದ್ದೇವೆ. ಈ ಎಲ್ಲ ಯೋಜನೆಗಳ ಪ್ರಯೋಜನ ಕರ್ನಾಟಕವೂ ಪಡೆದುಕೊಳ್ಳುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಜೆಟ್ನಲ್ಲಿ ಸ್ಟಾರ್ಟ್ಅಪ್ಗಳಿಗೆ ನಾವು ಹೆಚ್ಚಿನ ಒತ್ತು ನೀಡಿದ್ದೇವೆ. ಕೇಂದ್ರ ಬಜೆಟ್ನಲ್ಲಿ ಯುವಕರಿಗೆ ಮೂರು ಯೋಜನೆ ತಂದಿದ್ದೇವೆ.
ಯುವಕರಿಗೆ ತರಬೇತಿ, ಇಂಟರ್ನ್ಶಿಪ್ ಯೋಜನೆ, ಕೌಶಲ್ಯಾಭಿವೃದ್ಧಿ ನೀಡಲಾಗುವುದು. ಎಂಎಸ್ಎಮ್ಇಗಳಿಗೆ ಸ್ವಲ್ಪ ಸಮಸ್ಯೆ ಆಗುತ್ತಿದೆ, ಆ ಸಮಸ್ಯೆ ಬಗೆಹರಿಸಲು ಕೇಂದ್ರ ಬಜೆಟ್ನಲ್ಲಿ ಉತ್ತರ ನೀಡಿದ್ದೇವೆ. ಬಾಹ್ಯಾಕಾಶ ವಲಯಕ್ಕೆ ಬೆಂಗಳೂರಿನ ಕೊಡುಗೆ ಇದೆ. ಆವಾಸ್ ಯೋಜನೆಯಡಿ ಬಡ ವರ್ಗದ ಜನರಿಗೆ ಮನೆ ನೀಡಲಾಗುತ್ತಿದೆ. ಮಹಿಳೆಯರು, ಕೃಷಿ ವಲಯಕ್ಕೂ ಕೇಂದ್ರದಿಂದ ಯೋಜನೆ ತಂದಿದ್ದೇವೆ. ಈ ಎಲ್ಲ ಯೋಜನೆಗಳ ಪ್ರಯೋಜನ ಕರ್ನಾಟಕವೂ ಪಡೆದುಕೊಳ್ಳುತ್ತದೆ ಎಂದು ತಿಳಿಸಿದರು.
ಇನ್ನೂ ಕರ್ನಾಟಕ ಸರ್ಕಾರ ಎಲ್ಲದರಲ್ಲೂ ತೆರಿಗೆ ಹೆಚ್ಚಿಸಿದೆ. ದರ ಕೂಡ ಹೆಚ್ಚಳ ಆಗುತ್ತಿದೆ. ಸಹಜವಾಗಿ ಹಣದುಬ್ಬರ ಎದ್ದು ಕಾಣುತ್ತಿದೆ. ಕಂಪನಿಗಳು ಹೊರ ರಾಜ್ಯಕ್ಕೆ ಹೋಗುತ್ತಿವೆ. ಕಾನೂನು ಸುವ್ಯವಸ್ಥೆ ಕೆಟ್ಟು ಹೋಗಿದೆ. ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬರುತ್ತಿಲ್ಲ. ಎಸ್ಟಿ ಎಸ್ಸಿ ಹಣ ಬೇರೆ ಯೋಜನೆಗೆ ಬಳಕೆಯಾಗಿದೆ. ವಾಲ್ಮೀಕಿ ಹಣ ಏನಾಗಿದೆ ಅಂತ ನಿಮಗೆ ಗೊತ್ತು. ರಾಜ್ಯದಲ್ಲಿ ಈ ರೀತಿಯ ಆಡಳಿತ ನಡೆಸಲಾಗುತ್ತಿದೆ ಎಂದು ವಾಗ್ದಾಳಿ ಮಾಡಿದರು.