ಬೆಂಗಳೂರು: ಕರ್ನಾಟಕ ಸರ್ಕಾರ ಭ್ರಷ್ಟಾಚಾರ ಮತ್ತು ಒಳಜಗಳದ ತಾಣವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಸಹ ಭ್ರಷ್ಟಾಚಾರ ಮತ್ತು ಒಳಜಗಳದ ತಾಣವಾಗಿದೆ. ರಾಹುಲ್ ಗಾಂಧಿಯವರು ತಮ್ಮ ಸರ್ಕಾರವನ್ನು ನಿಯಂತ್ರಣ ಮಾಡಲಿ ಎಂದು ಒತ್ತಾಯಿಸಿದ್ದಾರೆ.
Advertisement
ದೇಶದ ಜನರು ಅವರ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದು, ಮೂರು ಬಾರಿ ಕಾಂಗ್ರೆಸ್ ಅನ್ನು ತಿರಸ್ಕಾರ ಮಾಡಿದ್ದಾರೆ. ರಾಹುಲ್ ಗಾಂಧಿ ನಕಾರಾತ್ಮಕ ಮನಸ್ಥಿತಿ ಹೊಂದಿದ್ದಾರೆ. ಈಗಲೂ ಸಹ ಕಾಂಗ್ರೆಸ್ ದೇಶದ ಅಭಿವೃದ್ಧಿ ಬಗ್ಗೆ ಯಾವುದೇ ಸಕಾರಾತ್ಮಕ ಚಿಂತನೆ ಹೊಂದಿಲ್ಲ ಎಂದು ಗೋಯಲ್ ಟೀಕಿಸಿದ್ದಾರೆ.