ಬೆಂಗಳೂರು:- ಕೇಂದ್ರ ಸರ್ಕಾರದ ಒನ್ ನೇಶನ್ ಒನ್ ಎಲೆಕ್ಷನ್‌ಗೆ ಕರ್ನಾಟಕ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.
Advertisement
ಈ ಬಗ್ಗೆ ಮಾತನಾಡಿದ CM ಸಿದ್ದರಾಮಯ್ಯ, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಅಲ್ಲದೇ ‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು.
ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ.
ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವವನ್ನು ಸಂಸತ್ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘ಒಂದು ದೇಶ ಒಂದು ಚುನಾವಣೆ’ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.