ಬೆಂಗಳೂರು:-ಮುಡಾ ಹಗರಣ ರಾಜ್ಯದಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಬಿಜೆಪಿ ಮತ್ತು ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಅಲ್ಲದೇ ರಾಜ್ಯದಾದ್ಯಂತ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ಹೊರ ಹಾಕಿದೆ.
ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ರಾಜ್ಯಪಾಲರ ವಿರುದ್ಧ ಏಕವಚನದಲ್ಲೇ ಸಲೀಂ ಅಹ್ಮದ್ ವಾಗ್ದಾಳಿ ಮಾಡಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಒಬ್ಬ ಅಯೋಗ್ಯ, ಬೇಜವಾಬ್ದಾರಿ ಗವರ್ನರ್. ಯಾವುದೇ ದಾಖಲೆ ಇಲ್ಲದೇ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ನಾವು ಸುಮ್ಮನೆ ಕೂರಲ್ಲ, ಹೋರಾಟ ಮಾಡ್ತೀವಿ ಎಂದು ಕಿಡಿಕಾರಿದ್ದಾರೆ.
ಇನ್ನೂ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟ ವಿಚಾರ, ಕಾಂಗ್ರೆಸ್ ಪಡೆ ಕೆರಳಿ ಕೆಂಡವಾಗುವಂತೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ಇಡೀ ಪಕ್ಷ ಷಡ್ಯಂತ್ರಕ್ಕೆ ಸವಾಲು ಎಂದು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.