ಬೆಂಗಳೂರು;- ದಕ್ಷಿಣ ಒಳನಾಡಿನ ಈ10 ಜಿಲ್ಲೆಗಳಲ್ಲಿ ಇಂದು ಅಧಿಕ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಭಾಗಮಂಡಲ,ಹಾರಂಗಿ, ಸಾಲಿಗ್ರಾಮ, ಪುತ್ತೂರು, ಮಡಿಕೇರಿ, ಸರಗೂರು, ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳ, ಮೂರ್ನಾಡು, ನಾಪೋಕ್ಲು, ವಿರಾಜಪೇಟೆಯಲ್ಲಿ ಮಳೆಯಾಗಿದೆ.
ವಿಜಯಪುರದಲ್ಲಿ 18.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.