ಬೆಳಗಾವಿ:- ಬದುಕು ಕಟ್ಟಿಕೊಳ್ಳಲು ಗೋವಾಕ್ಕೆ ಬಂದಿದ್ದ ಕನ್ನಡಿಗನ ಮೇಲೆ ದುಷ್ಕರ್ಮಿಗಳ ಗ್ಯಾಂಗ್ನಿಂದ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಅನಿಲ್ ರಾಠೋಡ್ ಹಲ್ಲೆಗೊಳಗಾದ ವ್ಯಕ್ತಿ. ಈತ ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದ ನಿವಾಸಿ ಎನ್ನಲಾಗಿದೆ. ಕನ್ನಡಿಗ ಲಾರಿ ಚಾಲಕ ಅನಿಲ್ ರಾಠೋಡ್, ಮಹಾರಾಷ್ಟ್ರದಿಂದ ಗೋವಾಕ್ಕೆ ಕಲ್ಲು ಸಾಗಿಸುತ್ತಿದ್ದರು. ಈ ವೇಳೆ ಗೋವಾದ ಪ್ರೆಡ್ನೆ ಬಳಿಯ ರಸ್ತೆಯಲ್ಲಿ ಕಾರು, ಜೀಪ್ನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಲಾರಿ ಅಡ್ಡಗಟ್ಟಿ ಗೂಂಡಾಗಿರಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಿಂದಿಸಿ ಹಲ್ಲೆ ಮಾಡಿದ್ದಾರೆ.
ಹಲ್ಲೆ ಮಾಡುತ್ತಿರುವುದನ್ನು ಲಾರಿ ಚಾಲಕ ಅನಿಲ್ ರಾಠೋಡ್ ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಪೆಡ್ನೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಯಾವುದೇ ರೀತಿ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಗೋವಾದಲ್ಲಿ ಕನ್ನಡಿಗರ ಮೇಲೆ ನಿರಂತರ ಹಲ್ಲೆ, ದೌರ್ಜನ್ಯ ನಡೆಯುತ್ತಿದೆ. ಹೀಗಾಗಿ ಗೋವಾ ಸಿಎಂ ಜೊತೆ ಮಾತಾಡಿ ಕನ್ನಡಿಗರನ್ನು ರಕ್ಷಿಸುವಂತೆ ಸಿಎಂ ಸಿದ್ದರಾಮಯ್ಯ ಅನಿಲ್ ಮನವಿ ಮಾಡಿದ್ದಾರೆ.