HomeBengaluru NewsKarnataka Rain Alert: ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು; ನಾಳೆ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Karnataka Rain Alert: ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು; ನಾಳೆ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

For Dai;y Updates Join Our whatsapp Group

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ವರ್ಷಧಾರೆಯಾಗುತ್ತಿದೆ.

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕರಾವಳಿ ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ ಇದ್ದು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಕೋಲಾರ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹೊನ್ನಾವರದಲ್ಲಿ ಅತಿ ಹೆಚ್ಚು ಮಳೆ ದಾಖಲು:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನಗರಬಸ್ತಿಕೇರಿಯಲ್ಲಿ ಅತಿ ಹೆಚ್ಚು 102 ಮಿ.ಮೀ ಮಳೆಯಾಗಿದೆ.

ಇನ್ನು ಸುಳ್ಯದ ದೇವಚಳ್ಳ ಹಾಗೂ ಕಾರ್ಕಳದ ನೀರೆಯಲ್ಲಿ ತಲಾ 99 ಮಿ.ಮೀ, ತೀರ್ಥಹಳ್ಳಿಯ ಆಗುಂಬೆಯಲ್ಲಿ 81 ಮಿ.ಮೀ, ಶೃಂಗೇರಿಯ ಕಿಗ್ಗದಲ್ಲಿ 52 ಮಿ.ಮೀ, ಸಕಲೇಶಪುರದ ಹೊಗದಹಳ್ಳದಲ್ಲಿ 44 ಮಿ.ಮೀ ಹಾಗೂ ವಿರಾಜಪೇಟೆಯ ಬಿರುನಾನಿಯಲ್ಲಿ 43 ಮಿ.ಮೀ ಮಳೆ ದಾಖಲಾಗಿದೆ.

ಮುಂದಿನ ದಿನಗಳಲ್ಲೂ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img