HomeMangaloreಮುಂಗಾರು ಅಬ್ಬರಕ್ಕೆ ಕರ್ನಾಟಕ ತತ್ತರ; ಕರಾವಳಿ-ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ, 10 ಜಿಲ್ಲೆಗಳಿಗೆ ಅಲರ್ಟ್

ಮುಂಗಾರು ಅಬ್ಬರಕ್ಕೆ ಕರ್ನಾಟಕ ತತ್ತರ; ಕರಾವಳಿ-ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ, 10 ಜಿಲ್ಲೆಗಳಿಗೆ ಅಲರ್ಟ್

For Dai;y Updates Join Our whatsapp Group

ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಮುಂದಿನ ಕೆಲ ದಿನಗಳ ಕಾಲ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭಾರೀ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಇದೇ ವೇಳೆ ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ತುರ್ತು ಪರಿಸ್ಥಿತಿಗೆ ಜಿಲ್ಲಾಡಳಿತಗಳು ಸಜ್ಜಾಗುವಂತೆ ಸೂಚಿಸಲಾಗಿದೆ.

ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ಪ್ರಾದೇಶಿಕ ಮುನ್ಸೂಚನೆಯ ಪ್ರಕಾರ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಭಾರೀ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯ ಸಾಧ್ಯತೆ ಇದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೊಡಗು, ಕೋಲಾರ ಹಾಗೂ ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ನದಿ, ಹೊಳೆ, ಜಲಪಾತಗಳ ಬಳಿ ತೆರಳುವುದನ್ನು ತಪ್ಪಿಸಬೇಕು. ಹಳೆಯ ಮರಗಳು, ವಿದ್ಯುತ್ ಕಂಬಗಳು ಹಾಗೂ ಅಪಾಯಕಾರಿಯಾದ ಕಟ್ಟಡಗಳ ಸಮೀಪ ನಿಲ್ಲದಂತೆ ಸೂಚಿಸಲಾಗಿದ್ದು, ಸ್ಥಳೀಯ ಆಡಳಿತದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img