2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ, ಅನುಪಮ ಗೌಡಗೆ ಅತ್ಯುತ್ತಮ ನಟಿ ಗೌರವ

0
Spread the love

2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ನಟ ಸುದೀಪ್ ಹಾಗೂ ನಟಿ ಅನುಪಮ ಗೌಡ ಕ್ರಮವಾಗಿ ಅತ್ಯುತ್ತಮ ನಟ, ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement

ಎಸ್ ಕೃಷ್ಣ ನಿರ್ದೇಶನದ ಪೈಲ್ವಾನ್ ಸಿನಿಮಾದಲ್ಲಿ ಸುದೀಪ್ ಅವರ ಅತ್ಯುತ್ತಮ ನಟನೆಗಾಗಿ ಈ ಪ್ರಶಸ್ತಿ ಬಂದಿದೆ. ಇನ್ನೂ ಥ್ರಿಲ್ಲರ್ ಚಿತ್ರ ‘ತ್ರಯಂಬಕಂನ ‘ ಅಮೋಘ ನಟನೆಗಾಗಿ ಅನುಪಮ ಗೌಡ ‘ಅತ್ಯುತ್ತಮ ನಟಿ’ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ಅವರ ‘ಮೋಹನದಾಸ’ ಮೊದಲ ಅತ್ಯುತ್ತಮ ಚಿತ್ರವಾಗಿದ್ದು, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಕ್ಟೆಲ್, ಅಘ್ಯಂ ಕ್ರಮವಾಗಿ ಎರಡನೇ ಹಾಗೂ ಮೂರನೇ ಅತ್ಯುತ್ತಮ ಚಿತ್ರವಾಗಿವೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್ಟೆಲ್’ ಗೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಬಂದಿದೆ. ಇದೇ ಚಿತ್ರದ ರಘು ದೀಕ್ಷಿತ್ ಗೆ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಲಭಿಸಿದೆ.

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಇಂಡಿಯಾ ವರ್ಸಸ್ ಇಂಗ್ಲೆಂಡ್’ ಸಿನಿಮಾಗೆ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದಲ್ಲಿನ ಅಭಿನಯಕ್ಕೆ ತಬಲಾ ನಾಣಿ ಅವರು ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅನುಷಾ ಕೃಷ್ಣ ಅವರು ‘ಬ್ರಾಹ್ಮಿ’ ಚಿತ್ರದಲ್ಲಿನ ನಟನೆಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಘೋಷಿಸಲಾಗಿದೆ.


Spread the love

LEAVE A REPLY

Please enter your comment!
Please enter your name here