ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ: ಜೋಶಿ

0
Spread the love

ಬೆಂಗಳೂರು: ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ ಎಂದು  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ. ಈ ಸಂಬಂಧ X ಮಾಡಿರುವ ಅವರು, ಸಿಎಂ ಕುರ್ಚಿ ಉಳಿಸಿಕೊಳ್ಳಲು ಈ ಮಾರ್ಗವನ್ನು ಹಿಡಿದಿರುವಂತೆ ಕಾಣುತ್ತಿದೆ‌ ಸಿದ್ದರಾಮಯ್ಯನವರೇ! ನಿಮ್ಮ‌ ಹತಾಶೆ ನಮಗೆ ಅರ್ಥವಾಗುತ್ತಿದೆ. ಆದರೆ, ಈ ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ’ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Advertisement

ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ ನೀತಿಗಳನ್ನು ಪಾಲಿಸುತ್ತೇವೆ ಎಂದು ಹೇಳುವ ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ‌. ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ ಸಿಎಂ ಸಿದ್ದರಾಮಯ್ಯನವರೇ? ನಿಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ ನಿಮಗೆ ಯಾಕೆ ಸಂಕೋಚ ಡಿಕೆ ಶಿವಕುಮಾರ್ ರವರೇ? ನಿಮ್ಮ‌ ಸರ್ಕಾರದ ದುರಾಡಳಿತವನ್ನು, ಭ್ರಷ್ಟತೆಯನ್ನು,

ಸುಭಿಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಹಾಳು ಮಾಡಿದ್ದನ್ನು, ಮಿತಿಮೀರಿದ ಓಲೈಕೆ ರಾಜಕಾರಣದ ಬಗ್ಗೆ ಮಾತನಾಡಿದರೆ ನಿಮಗೆ ಏಕೆ ಭಯ? ಖಾಸಗಿ ನ್ಯೂಸ್ ಚಾನೆಲ್ ಮುಖ್ಯಸ್ಥರನ್ನು ಬಂಧಿಸಲು ಕರ್ನಾಟಕದ ಪೊಲೀಸರನ್ನು ಕಳುಹಿಸಿರುವುದು ಯಾವ ಸಂದೇಶ ನೀಡುವುದಕ್ಕಾಗಿ? ನಿಮ್ಮ‌ ಸರ್ಕಾರದ ವೈಫಲ್ಯ ಮುಚ್ಚಿಸಿಡಲು, ನಿಮ್ಮ ಆತಂಕ, ದುಗುಡ ಈ ಆದೇಶದಲ್ಲಿ ಭಾಸವಾಗುತ್ತಿದೆ ಎಂದು ಹೇಳಿದ್ದಾರೆ.

 


Spread the love

LEAVE A REPLY

Please enter your comment!
Please enter your name here