HomeKarnataka Newsಜಾತಿ ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ಕರ್ನಾಟಕದ ಜಾತಿಗಣತಿ ವರದಿಯೇ ಮಾದರಿ: ಆರ್‌ ಅಶೋಕ್ ವಾಗ್ದಾಳಿ

ಜಾತಿ ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ಕರ್ನಾಟಕದ ಜಾತಿಗಣತಿ ವರದಿಯೇ ಮಾದರಿ: ಆರ್‌ ಅಶೋಕ್ ವಾಗ್ದಾಳಿ

For Dai;y Updates Join Our whatsapp Group

Spread the love

ಬೆಂಗಳೂರು: ಜಾತಿ ಜನಗಣತಿ ಹೇಗೆ ಮಾಡಬಾರದು ಎನ್ನುವುದಕ್ಕೆ ಕರ್ನಾಟಕದ ಜಾತಿಗಣತಿ ವರದಿಯೇ ಮಾದರಿ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಜಾತಿ ಗಣತಿಗೆ ಕರ್ನಾಟಕದ ಮಾದರಿ ಅಳವಡಿಸಿ ಎಂದು ತಾವು ನೀಡಿರುವ ಹೇಳಿಗೆ ನಿಜಕ್ಕೂ ಹಾಸ್ಯಾಸ್ಪದ. ಮೂಲ ಪ್ರತಿ ಕಳೆದು ಹೋಗಿರುವ,

ಕಾರ್ಯದರ್ಶಿಗಳ ಸಹಿಯೇ ಇಲ್ಲದ, ಪುಟಕ್ಕೆ 5-10 ರೂಪಾಯಿ ನೀಡಿ ಶಾಲಾ ಮಕ್ಕಳ ಕೈಯಲ್ಲಿ ಅರ್ಜಿ ಭರ್ತಿ ಮಾಡಿಸಿರುವ, ನಾಯಿಗಳು ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಹೋಗದ, ಹತ್ತು ವರ್ಷಗಳಾದರೂ ಸ್ವೀಕರಿಸಿದ ನಿಮ್ಮ ಜಾತಿ ಗಣತಿ ವರದಿ, ಜಾತಿ ಜನಗಣತಿಯನ್ನು ಹೇಗೆ ಮಾಡಬಾರದು ಎನ್ನುವುದಕ್ಕೆ ಮಾದರಿ ಎಂದಿದ್ದಾರೆ.

ಜಾತಿ ಜನಗಣತಿಯನ್ನ ಬಿಜೆಪಿ ವಿರೋಧಿಸುತ್ತಲೇ ಬಂದಿದೆ ಎಂದು ತಾವು ಹೇಳಿರುವುದು ಹಸಿ ಸುಳ್ಳು. 2010ರಲ್ಲಿ ಅಂದಿನ ಲೋಕಸಭೆಯ ವಿಪಕ್ಷ ನಾಯಕಿ ದಿವಂಗತ ಸುಷ್ಮಾ ಸ್ವರಾಜ್ ಅವರು 2011ರ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಬಿಜೆಪಿ ಬೆಂಬಲಿಸುತ್ತದೆ ಎಂದು ಲಿಖಿತ ರೂಪದಲ್ಲಿ ಯುಪಿಎ ಸರ್ಕಾರಕ್ಕೆ ತಿಳಿಸಿದ್ದರು. ಸಂಸತ್ತಿನಲ್ಲಿ ಅಂಗೀಕರಿಸಲಾದ ಸರ್ವಾನುಮತದ ನಿರ್ಣಯವನ್ನೂ ಬಿಜೆಪಿ ಬೆಂಬಲಿಸಿತ್ತು ಎಂದು ಹೇಳಿದ್ದಾರೆ.

ಆದರೆ, ಅಂದಿನ ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯ ಬದಲು ಕಾಟಾಚಾರಕ್ಕೆ ಸಾಮಾಜಿಕ-ಆರ್ಥಿಕ ಜಾತಿ ಜನಗಣತಿ – 2011 (SECC-2011) ಸಮೀಕ್ಷೆಯ ನಡೆಸಿತು. ಕರ್ನಾಟಕದ ಜಾತಿ ಗಣತಿಯಂತೆ ಕಳಪೆ ಯೋಜನೆ ಮತ್ತು ಅಸಮರ್ಥ ಅನುಷ್ಠಾನದಿಂದಾಗಿ ಅದು ಸಂಪೂರ್ಣವಾಗಿ ವಿಫಲವಾಯಿತು.

ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ ನಂತರವೂ ಅದರ ಫಲಿತಾಂಶಗಳನ್ನು ಬಿಡುಗಡೆ ಮಾಡಲೇ ಇಲ್ಲ. ಇದು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಗಣತಿ ಬಗ್ಗೆ ಇರುವ ನಿಜವಾದ ಬದ್ಧತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!