ಕರೂರ್:– ಕರೂರಿನ ಕಾಲ್ತುಳಿತದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಸಹಾಯಧನವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ . ಹಣ ಮತ್ತು ಗಾಯಾಳುಗಳಿಗೆ 50,000 ರೂ. ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ.
ತಮಿಳುನಾಡು ವೆಟ್ರಿ ಕಳಗಂ ನಾಯಕ ವಿಜಯ್ ಅವರು ಪೀಪಲ್ಸ್ ಮೀಟಿಂಗ್ ಎಂಬ ಅಭಿಯಾನವನ್ನು ನಡೆಸುತ್ತಿದ್ದಾರೆ. ಅವರು ಇಲ್ಲಿಯವರೆಗೆ 4 ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದರು. ಸೆಪ್ಟೆಂಬರ್ 27ರಂದು ಕರೂರ್‌ನಲ್ಲಿ ಪ್ರಚಾರ ನಡೆಸುವಾಗ ಅತಿಯಾದ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿ 39 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಇನ್ನೂ ಕರೂರ್ ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ತಮಿಳುನಾಡು ಸರ್ಕಾರ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದಲ್ಲದೆ, ನಟ ವಿಜಯ್ ಕೂಡ ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 2 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.