ಕಾರವಾರ :- ವೃದ್ಧನೊಬ್ಬ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಅಂಕೋಲ ತಾಲೂಕಿನ ಉಳವರೆ ಗ್ರಾಮದಲ್ಲಿ ನಡೆದಿದೆ. 65 ವರ್ಷದ ತಮ್ಮಣ್ಣಿ ಅನಂತ ಗೌಡ ಮೃತ ವೃದ್ಧ.
Advertisement
ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಅವರು ಸಾವಿಗೀಡಾಗಿದ್ದಾರೆ. ಅಂಕೋಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ಶವವನ್ನು ಅಂಕೋಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.