ವಿಜಯಸಾಕ್ಷಿ ಸುದ್ದಿ, ಧಾರವಾಡ : ಕರ್ನಾಟಕ ಲೋಕಸೇವಾ ಆಯೋಗ ಮಂಗಳವಾರ ನಡೆಸಿದ ಕೆಎಎಸ್ ಪೂರ್ವಭಾವಿ ಪರೀಕ್ಷೆಯು ಧಾರವಾಡದಲ್ಲಿ ಸೂಸುತ್ರವಾಗಿ ಮತ್ತು ಶಾಂತಿಯುತವಾಗಿ ಜರುಗಿತು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಗರದ ವಿವಿಧ ಕಾಲೇಜುಗಳಲ್ಲಿ ಸ್ಥಾಪಿಸಿದ್ದ ಕೆ.ಎ.ಎಸ್ ಪ್ರಿಲಿಮ್ಸ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಸಿ.ಸಿ ಟಿ.ವಿ, ಫೇಸ್ ರೀಡಿಂಗ್ ಇತ್ಯಾದಿಗಳ ಪಾಲನೆ ಕುರಿತು ನೋಡಲ್ ಅಧಿಕಾರಿ ಮತ್ತು ಪ್ರಾಚಾರ್ಯರಿಂದ ಮಾಹಿತಿ ಪಡೆದರು.
ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ರಾಜೀವ ಗಾಂಧಿ ಪ್ರೌಢಶಾಲೆ, ಬಾಷಲ್ ಮಿಷನ್ ಗರ್ಲ್ಸ್ ಹೈಸ್ಕೂಲ್, ಕಿಟಲ್ ಕಲಾ ಹಾಗೂ ವಿಜ್ಞಾನ ಮಹಾವಿದ್ಯಾಲಯ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.
ಧಾರವಾಡ ನಗರದ ವಿವಿಧ ಕಾಲೇಜುಗಳಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆಗಾಗಿ 33 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆಯಲು 10,818 ಜನ ಅಭ್ಯರ್ಥಿಗಳು ಧಾರವಾಡ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದರು.
ಬೆಳಿಗ್ಗೆ 10ರಿಂದ 12 ಗಂಟೆವರೆಗೆ ಜರುಗಿದ ಮೊದಲ ಪೇಪರ್ ಪರೀಕ್ಷೆಗೆ 6,879 ಅಭ್ಯರ್ಥಿಗಳು ಹಾಜರಾಗಿದ್ದರು ಮತ್ತು 3,939 ಜನ ಅಭ್ಯರ್ಥಿಗಳು ಗೈರಾಗಿದ್ದರು. ಮದ್ಯಾಹ್ನ 2ರಿಂದ 4 ಗಂಟೆವೆರೆಗೆ ಎರಡನೇ ಪತ್ರಿಕೆ ಪರೀಕ್ಷೆಗೆ 7,062 ಅಭ್ಯರ್ಥಿಗಳು ಹಾಜರಾಗಿದ್ದರು ಮತ್ತು 3,756 ಜನ ಅಭ್ಯರ್ಥಿಗಳು ಗೈರಾಗಿದ್ದರು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.