ಬೆಂಗಳೂರು:- ಸಿನಿಪ್ರಿಯರಿಗೆ ರಾಜ್ಯ ಸರ್ಕಾರ ಒಂದು ಮಹತ್ವದ ಸೂಚನೆ ಕೊಟ್ಟಿದೆ. ಮಲ್ಟಿಪ್ಲೆಕ್ಸ್ ಗಳಲ್ಲಿ ಸಿನಿಮಾ ನೋಡಿದ್ರೆ ಟಿಕೆಟ್ ಜೋಪಾನವಾಗಿ ಇಟ್ಕೊಳ್ಳಿ ಎಂದು ಪ್ರೇಕ್ಷಕರಿಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಚಲನಚಿತ್ರ ಪ್ರದರ್ಶನಕ್ಕೆ ನೀಡಿರುವ ಟಿಕೆಟ್ ದರಕ್ಕೆ ಸಂಬಂಧಿಸಿದಂತೆ ಭೌತಿಕವಾಗಿ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪಡೆದ ಟಿಕೆಟ್‌ಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ಎಲ್ಲಾ ರೀತಿಯಾ ಸಿನಿಮಾ ಟಿಕೆಟ್ ಮಾರಾಟದ ಸಂಪೂರ್ಣ ದಾಖಲೆಗಳನ್ನ ಇಡಬೇಕೆಂದು ರಾಜ್ಯ ಸರ್ಕಾರವು ಆದೇಶಿಸಿದೆ.
ಮಲ್ಟಿಪ್ಲೆಕ್ಸ್‌ನಲ್ಲಿ ಟಿಕೆಟಿಗೆ ಗರಿಷ್ಠ 200 ರೂ. ನಿಗದಿ ಮಾಡಿದ ಪ್ರಕರಣದಲ್ಲಿ ಹೈಕೋರ್ಟ್ ಅಂತಿಮ ಆದೇಶದಲ್ಲಿ ಅರ್ಜಿದಾರರಿಗೆ ಹಿನ್ನಡೆಯಾದಲ್ಲಿ, ಗ್ರಾಹಕರಿಂದ ಸಂಗ್ರಹವಾದ ಹೆಚ್ಚುವರಿ ಮೊಬಲಗನ್ನು ಅವರುಗಳು ಪಾವತಿಸಿದ ವಿಧಾನದಲ್ಲಿಯೇ ಹಿಂದಿರುಗಿಸಬೇಕಾಗುತ್ತೆ. ಹಾಗಾಗಿ ರಾಜ್ಯ ಹಾಗೂ ಗ್ರಾಹಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮೇಲಿನ ನಿರ್ದೇಶನಗಳನ್ನು ನೀಡಿರುತ್ತದೆ ಅಂತಾ ಸರ್ಕಾರ ಸ್ಪಷ್ಟಪಡಿಸಿದೆ.