HomePolitics Newsಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಡಿಕೆಶಿ ಸಿಎಂ ಆದ್ರೆ ಒಳ್ಳೆಯದು: ಕದಲೂರು ಉದಯ್

ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಡಿಕೆಶಿ ಸಿಎಂ ಆದ್ರೆ ಒಳ್ಳೆಯದು: ಕದಲೂರು ಉದಯ್

For Dai;y Updates Join Our whatsapp Group

Spread the love

ಮಂಡ್ಯ:- ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿದ್ರೆ ಒಳ್ಳೆಯದು ಎಂದು ಕದಲೂರು ಉದಯ್ ಹೇಳಿದ್ದಾರೆ.

ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರು ಪಕ್ಷಕ್ಕೆ ಮಾಡಿದ ಕೆಲಸ ಹಾಗೂ ಮುಂದಿನ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಉಪಯೋಗವಾಗುವುದು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಆಗಿ ಮಾಡಬೇಕೆಂದು ಉದಯ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು. ಸದ್ಯ ರಾಜ್ಯದಲ್ಲಿ ಇದೇ ವಿಚಾರ ಚರ್ಚೆಯಾಗುತ್ತಿದೆ. ಹೀಗಾಗಿ ಈ ಗೊಂದಲಗಳಿಗೆ ತೆರೆ ಎಳೆಯಿರಿ ಎಂದು ಶಾಸಕರ ನಿಯೋಗ ದೆಹಲಿಗೆ ಹೋಗಿದೆ. ಹೈಕಮಾಂಡ್ ಮುಂದೆ ಇದೇ ವಿಚಾರವನ್ನು ಅವರುಗಳು ಮಾತನಾಡುತ್ತಾರೆ ಎಂದು ಅವರಲ್ಲಿ ಇದ್ದ ಇಬ್ಬರು ನನಗೆ ಹೇಳಿದ್ದಾರೆ ಎಂದರು.

ಎಲ್ಲಾ ಗೊಂದಲಗಳಿಗೂ ಶೀಘ್ರದಲ್ಲಿ ಪರಿಹಾರವನ್ನು ಹೈಕಮಾಂಡ್ ಕೊಡುತ್ತೆ ಎಂಬ ನಂಬಿಕೆ ಇದೆ. ಸಿದ್ದರಾಮಯ್ಯ ಅವರ ಆಡಳಿತ ಹಾಗೂ ನಾಯಕತ್ವದ ಬಗ್ಗೆ ನಮಗೆ ಪ್ರಶ್ನೆಗಳಿಲ್ಲ. ಡಿ.ಕೆ ಶಿವಕುಮಾರ್ ಅವರ ಪಕ್ಷ ಸಂಘಟನೆ ದೃಷ್ಟಿಯಿಂದ ಡಿಕೆಶಿ ಅವರಿಗೆ ಸಿಎಂ ಸ್ಥಾನ ನೀಡಬೇಕೆಂದು ನನ್ನನ್ನು ಒಳಗೊಂಡಂತೆ ಹಲವರು ಅಭಿಪ್ರಾಯಪಟ್ಟಿದ್ದಾರೆ. ಹೈಕಮಾಂಡ್ ಯಾವ ನಿರ್ಧಾರಕ್ಕೆ ಬರುತ್ತೆ ಅದಕ್ಕೆ ನಾವು ಬದ್ಧವಾಗಿ ಇರುತ್ತೇವೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!