ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸೌಧದ ನಿರ್ಮಾತೃ ದಿವಂಗತ ಶ್ರೀ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಿವಂಗತ ಕೆಂಗಲ್ ಹನುಮಂತಯ್ಯ ನವರ ಮೊಮ್ಮಗನಾದ ಶ್ರೀ ಕೆಂಗಲ್ ಶ್ರೀ ಪಾದ ರೇಣು ಅವರು ಉಪಸ್ಥಿತರಿದ್ದು, ಮುಖ್ಯಮಂತ್ರಿಗಳ ಜೊತೆಗೂಡಿ ಪ್ರತಿಮೆಗೆ ಪುಷ್ಪಗುಚ್ಛ ಸಮರ್ಪಿಸಿದರು.
ಐಟಿ-ಬಿಟಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ನಸೀರ್ ಅಹಮದ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯನವರ ನಾಡಿಗೆ ನೀಡಿದ ಕೊಡುಗೆ ಮತ್ತು ಆಡಳಿತಾತ್ಮಕ ದೂರದೃಷ್ಟಿಯನ್ನು ಸ್ಮರಿಸಲಾಯಿತು.



