Accident: ಬೆಂ-ಮೈ ಹೆದ್ದಾರಿಯಲ್ಲಿ ಕೇರಳ ಬಸ್ ಅಪಘಾತ: ಚಾಲಕ ಸಾವು

0
Spread the love

ಮಂಡ್ಯ: ಜಿಲ್ಲೆಯ ಮದ್ದೂರಿನ ಗೆಜ್ಜಲಗೆರೆ ಬಳಿ ಬೆಳಗ್ಗಿನ ಜಾವ 5.30ರಲ್ಲಿ ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿ ತಡೆ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಸಾವನ್ನಪ್ಪಿದ್ದು, ಡ್ರೈವರ್ ಆಸೀಫ್ (45) ಎಂದು ಗುರುತಿಸಲಾಗಿದೆ.

Advertisement

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೇರಳಕ್ಕೆ ಹೊರಟಿದ್ದ ಕೇರಳ ಸಾರಿಗೆ ಸಂಸ್ಥೆಯ ಬಸ್ಸು ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಬೆಳಗ್ಗಿನ ಜಾವ 5:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿದ್ದು, ಈ ಅವಘಡಕ್ಕೆ ಕಾರಣವಾಗಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here