ಕೆ.ಜಿ. ಹಳ್ಳಿ ಕುಟುಂಬಗಳು ಬೀದಿಪಾಲು: ವೆಲ್ಫೇರ್ ಪಾರ್ಟಿ ಆಕ್ರೋಶ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ನ. 3ರಂದು ನಗರದ ಮಧ್ಯ ಭಾಗದ ಕೆ.ಜಿ. ಹಳ್ಳಿಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಜೆಸಿಬಿಗಳ ಮೂಲಕ 30ಕ್ಕಿಂತ ಹೆಚ್ಚು ಮನೆಗಳನ್ನು ನೆಲಸಮ ಮಾಡಿ ನೂರಕಕ್ಕೂ ಹೆಚ್ಚು ಕುಟುಂಬಗಳನ್ನು ಬೀದಿಗೆ ತಳ್ಳಲಾಗಿದೆ. ಈ ಬಗ್ಗೆ ಕ್ಷೇತ್ರದ ಶಾಸಕರು ಮೌನವಾಗಿದ್ದು, ಯಾವುದೇ ಸಹಾಯ ನೀಡುತ್ತಿಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್ ಕಳವಳ ವ್ಯಕ್ತಪಡಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಲ್ಲಿನ ನಿವಾಸಿಗಳ ಪ್ರಕಾರ, ಸರ್ಕಾರವೇ ಸ್ಲಮ್ ಬೋರ್ಡ್ ಅಡಿಯಲ್ಲಿ ಮನೆಗಳನ್ನು ಮಂಜೂರು ಮಾಡಿದ್ದು, ಈ ಬಗ್ಗೆ ನಿವಾಸಿಗಳು ಮಾನ್ಯವಾದ ದಾಖಲೆಗಳನ್ನು ಹೊಂದಿದ್ದಾರೆ. ಸರಿಯಾದ ಸೂಚನೆ ಅಥವಾ ಪುನರ್ವಸತಿ ಕ್ರಮಗಳಿಲ್ಲದೆ ಧ್ವಂಸ ಕಾರ್ಯಾಚರಣೆಗಳು ನಡೆದಿದ್ದು, ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ನಿಯೋಗ ಈ ಪ್ರದೇಶಕ್ಕೆ ಭೇಟಿ ನೀಡಿ ಪೀಡಿತ ಜನರ ಅಹವಾಲು ಕೇಳಿ ಒಗ್ಗಟ್ಟನ್ನು ವ್ಯಕ್ತಪಡಿಸಿದೆ. ಇದು ದಶಕಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿರುವ ಬಡ ಮತ್ತು ಕಾರ್ಮಿಕ ವರ್ಗದ ಕುಟುಂಬಗಳ ಮೇಲಿನ ಕ್ರೂರ ದಾಳಿ ಎಂದು ಹೇಳಿದ್ದು, ಸರ್ಕಾರ ತಕ್ಷಣ ಈ ಕುಟುಂಬಗಳಿಗೆ ಪುನರ್ವಸತಿ ಮತ್ತು ನ್ಯಾಯಯುತ ಪರಿಹಾರವನ್ನು ನೀಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹಬೀಬುಲ್ಲಾ ಖಾನ್, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್, ಮುಖಂಡರಾದ ಸೈಯದ್ ಇರ್ಫಾನ್ ಇತರರು ಇದ್ದರು.


Spread the love

LEAVE A REPLY

Please enter your comment!
Please enter your name here