ಬಳ್ಳಾರಿ : ಬಳ್ಳಾರಿ ತಾಲೂಕಿನ ಬೆಣಕಲ್ಲು ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ ಆರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಮೋಕಾ ಪೊಲೀಸ್ ಠಾಣೆಯ ಪಿಎಸ್ಐ ಕಾಳಿಂಗ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆಯಲ್ಲಿ ರೂ.46,800 ನಗದು ಹಣ ಜಪ್ತಿಪಡಿಸಿಕೊಂಡಿದ್ದಾರೆ.
ಒಟ್ಟು 11 ಆರೋಪಿಗಳ ಪೈಕಿ ಆರು ಜನರನ್ನು ಬಂಧಿಸಿದ್ದು, ಉಳಿದವರು ಪರಾರಿಯಾಗಿದ್ದಾರೆ. ಈ ಬಗ್ಗೆ ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



